RSS ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ: 'ಟಾಪ್ ಅಜೆಂಡಾ'ಏನು ಗೊತ್ತಾ?
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಹಿರಿಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದು, ಹಿಂದೂಗಳನ್ನು ಸಂಪರ್ಕಿಸಿ, ಅವರಿಗೆ ಏಕತೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

ಲಖನೌ: ಉತ್ತರ ಪ್ರದೇಶದ ಲಖನೌನ ವೃಂದಾವನದಲ್ಲಿ ಪ್ರಾರಂಭವಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಏಳು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸಭೆಯ ಮೊದಲ ದಿನ ‘ಲವ್ ಜಿಹಾದ್’ ಅಕ್ರಮ ವಲಸೆ ಮತ್ತು ಹಿಂದೂಗಳ ಒಗ್ಗೂಡಿಸುವಿಕೆ ಕುರಿತು ಪ್ರಮುಖವಾಗಿ ಚರ್ಚಿಸಲಾಗಿದೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಹಿರಿಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದು, ಹಿಂದೂಗಳನ್ನು ಸಂಪರ್ಕಿಸಿ, ಅವರಿಗೆ ಏಕತೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು. ಹಿಂದೂ ಸಮಾಜದಲ್ಲಿ ಲವ್ ಜಿಹಾದ್ ಮತ್ತು ವಿಭಜನೆ ಬಗ್ಗೆ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಂದು ಹಿಂದೂ ಕುಟುಂಬವನ್ನು ಸಂಪರ್ಕಿಸಬೇಕು. ಹಿಂದೂಗಳು ಒಗ್ಗಟ್ಟಾಗಿರಲು ಮನವೊಲಿಸಬೇಕು ಎಂದು ಸಂಘದ ಪದಾಧಿಕಾರಿಗಳಿಗೆ ಹೇಳಿರುವುದಾಗಿ ಮೂಲಗಳು ಹೇಳಿವೆ.
ಹಿಂದೂಗಳ ಒಗ್ಗಟ್ಟಾಗಿ ಇದ್ದಾಗ ಮಾತ್ರ ಭಾರತ ಬಲಿಷ್ಠವಾಗಲು ಸಾಧ್ಯ. ಸ್ವಯಂಸೇವಕರು ಈ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಲವ್ ಜಿಹಾದ್' ವಿರುದ್ಧ ನಾವು ಕಾವಲುಗಾರರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕಿರುಕುಳ ಮತ್ತು ಅಕ್ರಮ ವಲಸೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಜನವರಿ ಹತ್ತರಿಂದ ನಭಪೀಠ ಸುದಾಮ ಕುಟಿಯ ಶತಮಾನೋತ್ಸವಕ್ಕೆ ಭಾಗವತ್ ಚಾಲನೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



