ಉಮರ್ ಖಾಲಿದ್ ಗೆ ಪತ್ರ: 'ನಿಮ್ಮದು ನೀವು ನೋಡಿಕೊಳ್ಳಿ'; ಮಮ್ದಾನಿಗೆ ಭಾರತದ ತಿರುಗೇಟು!
ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸಬೇಕು ಎಂದು ಭಾರತ ತಿರುಗೇಟು ನೀಡಿದೆ.

ನವದೆಹಲಿ: ದೇಶದ್ರೋಹ ಆರೋಪದಲ್ಲಿ ಜೈಲಿನಲ್ಲಿರುವ ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಪತ್ರ ಬರೆದಿರುವುದನ್ನು ಭಾರತ ಶುಕ್ರವಾರ ಅಸಮ್ಮತಿ ವ್ಯಕ್ತಪಡಿಸಿದೆ.
ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸಬೇಕು ಎಂದು ತಿರುಗೇಟು ನೀಡಿದೆ. ಕಳೆದ ತಿಂಗಳು ಅಮೆರಿಕದಲ್ಲಿ ಉಮರ್ ಖಾಲಿದ್ ಅವರ ಪೋಷಕರು ಭೇಟಿಯಾದಾಗ ಅನಿವಾಸಿ ಭಾರತೀಯ ಮಮ್ದಾನಿ, ಖಾಲಿದ್ ಗೆ ತಮ್ಮ ಕೈಯಿಂದಲೇ ಬರೆದ ಪತ್ರವೊಂದನ್ನು ಬರೆದಿದ್ದರು.
ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, "ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು.
ವೈಯಕ್ತಿಕ ಪೂರ್ವಾಗ್ರಹಗಳನ್ನು ವ್ಯಕ್ತಪಡಿಸುವುದು ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಯೋಗ್ಯವಲ್ಲ. ಅಂತಹ ಹೇಳಿಕೆಗಳ ಬದಲಿಗೆ, ಅವರಿಗೆ ವಹಿಸಲಾದ ಜವಾಬ್ದಾರಿಗಳತ್ತ ಗಮನ ಹರಿಸುವುದು ಉತ್ತಮ ಎಂದು ಜೈಸ್ವಾಲ್ ತಿರುಗೇಟು ನೀಡಿದರು.
ಸೆಪ್ಟೆಂಬರ್ 2020 ರ ದೆಹಲಿ ಗಲಭೆ ಪಿತೂರಿ ಆರೋಪದಲ್ಲಿ ಜೈಲಿನಲ್ಲಿರುವ ಖಾಲಿದ್‌ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



