ಈ ಬಾರಿ ಫೆಬ್ರವರಿ 1ಕ್ಕೆ ಭಾನುವಾರ ಕೇಂದ್ರ ಬಜೆಟ್; ಜನವರಿ 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!
ಜನವರಿ 29 ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ

ನವದೆಹಲಿ: 2025-26ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಭಾನುವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು. ಜನವರಿ 29 ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶುಕ್ರವಾರ ಮಾಹಿತಿ ಹಂಚಿಕೊಂಡಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28 ರಂದು ಆರಂಭವಾಗಲಿದ್ದು, ಏಪ್ರಿಲ್ 2 ರವರೆಗೆ ಮುಂದುವರಿಯುತ್ತದೆ ಎಂದು ಅವರು ತಿಳಿಸಿದ್ದಾರೆ.
ವಾಡಿಕೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 28 ರಂದು ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ಮುರ್ಮು ಅವರು ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಅಧಿವೇಶನದ ಮೊದಲ ಹಂತವು ಜನವರಿ 28 ರಿಂದ ಫೆಬ್ರವರಿ 13ರವರಗೆ, ಎರಡನೇ ಹಂತ ಮಾರ್ಚ್ 9 ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


