ದೇಶ

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯ

ಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಪೊಲೀಸರು ಘಟನೆ ಬಗ್ಗೆ ತನಿಖೆ ಮಾಡುತ್ತಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯ
ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ
Published On :

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್‌ನ ಬಾರಾ ಬಜಾರ್ TOP ಪ್ರದೇಶದ ಹಬೀಬ್ ನಗರದಲ್ಲಿ ಬುಧವಾರ ಪ್ರಬಲ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ಜನ ಖಾಲಿ ಜಾಗದಲ್ಲಿ ಪೊದೆಗಳನ್ನು ತೆರವುಗೊಳಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಜೋರಾದ ಸ್ಫೋಟ ಸಂಭವಿಸಿದ್ದು, ಆ ಪ್ರದೇಶ ಜನರಲ್ಲಿ ಭೀತಿ ಮತ್ತು ಅವ್ಯವಸ್ಥೆ ಉಂಟು ಮಾಡಿದೆ.

ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ಎಲ್ಲಾ ಗಾಯಾಳುಗಳನ್ನು ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಪೊಲೀಸರು ಘಟನೆ ಬಗ್ಗೆ ತನಿಖೆ ಮಾಡುತ್ತಿದ್ದಾರೆ.

ಸದ್ಯ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ(FSL) ತಂಡವನ್ನು ತನಿಖೆಗಾಗಿ ಕರೆಸಲಾಗಿದೆ.

"ಹಜಾರಿಬಾಗ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಪತಿ, ಪತ್ನಿ ಮತ್ತು ಇನ್ನೊಬ್ಬ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸ್ಫೋಟದ ಸ್ವರೂಪ ಮತ್ತು ಕಾರಣವನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ" ಎಂದು ಜಾರ್ಖಂಡ್ ಪೊಲೀಸ್ ವಕ್ತಾರ ಮೈಕೆಲ್‌ರಾಜ್ ಎಸ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.