ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು
ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದಾರೆ.
ಇಂದು ಬೆಳಿಗ್ಗೆ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಗೆ ವಿಜಯ್ ಅವರು ಕಾರಿನಲ್ಲಿ ಆಗಮಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ತನಿಖಾ ಸಂಸ್ಥೆಯ ಭ್ರಷ್ಟಾಚಾರ ನಿಗ್ರಹ ಘಟಕದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಮಂಗಳವಾರ ಮತ್ತೆ ಹಾಜರಾಗುವಂತೆ ಅವರಿಗೆ ಸೂಚಿಸಿದ್ದು, ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಪ್ರಕರಣವನ್ನು ಎಸ್‌ಐಟಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಸಿಬಿಐ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



