ತೆಲಂಗಾಣದಲ್ಲಿ ಕವಿತಾ ಹೊಸ ಪಕ್ಷ ಸ್ಥಾಪನೆ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!
ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ ಕವಿತಾ ಮಾತುಕತೆ ನಡೆಸಿದ್ದಾರೆ. ಹೊಸ ಪಕ್ಷ ಸ್ಥಾಪನೆ, ಅದಕ್ಕೆ ತೆಲಂಗಾಣದಲ್ಲಿ ರಾಜಕೀಯ ನೆಲೆ, ಮತ್ತಿತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಹೈದರಾಬಾದ್: ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಜಾಗೃತಿ ಮೂಲಗಳು ಸೋಮವಾರ ತಿಳಿಸಿವೆ. ಕವಿತಾ ತೆಲಂಗಾಣ ಜಾಗೃತಿ, ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.
ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ ಕವಿತಾ ಮಾತುಕತೆ ನಡೆಸಿದ್ದಾರೆ. ಹೊಸ ಪಕ್ಷ ಸ್ಥಾಪನೆ, ಅದಕ್ಕೆ ತೆಲಂಗಾಣದಲ್ಲಿ ರಾಜಕೀಯ ನೆಲೆ, ಮತ್ತಿತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಆರ್‌ಎಸ್ ಸಂಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ರಾವ್ ಅವರ ಪುತ್ರಿ ಕವಿತಾ ಅವರನ್ನು ಸೆಪ್ಟೆಂಬರ್, 2025 ರಲ್ಲಿ ಪಕ್ಷದಿಂದ ಉಚ್ಛಾಟಿಸಲಾಗಿತ್ತು.
ಆಗಿನಿಂದಲೂ ತೆಲಂಗಾಣ ಜಾಗೃತಿ, ಸಾಂಸ್ಕೃತಿಕ ಸಂಘಟನೆಯಡಿ ಸಾರ್ವಜನಿಕ ಸಮಸ್ಯೆಗಳ ಮೇಲೆ ಕವಿತಾ ಗಮನ ಕೇಂದ್ರೀಕರಿಸಿದ್ದಾರೆ. ಇತ್ತೀಚಿಗೆ ಅವರು ವಿಧಾನಪರಿಷತ್ ಸದಸ್ಯತ್ವಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಗುತಾ ಸುಖೇಂದರ್ ರೆಡ್ಡಿ ಅವರು ಅಂಗೀಕರಿಸಿದ್ದಾರೆ.
ಕಳೆದ ವರ್ಷ ಬಿಆರ್ ಎಸ್ ಹಾಗೂ ಆಡಳಿತಾರೂಢ ಕಾಂಗ್ರೆಸ್ ಎರಡೂ ಭ್ರಷ್ಟಾಚಾರ ಪಕ್ಷಗಳೆಂದು ಆರೋಪಿಸಿದ್ದ ಕವಿತಾ, ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತೇನೆ ಮತ್ತು 2014 ರಲ್ಲಿ ತೆಲಂಗಾಣ ರಚನೆಯಾದ ನಂತರ ನಡೆದ ಎಲ್ಲಾ "ಅನ್ಯಾಯ"ಗಳ ಬಗ್ಗೆ ತನಿಖೆ ನಡೆಸುತ್ತೇನೆ ಎಂದು ಹೇಳಿದ್ದರು.
ಈ ತಿಂಗಳ ಆರಂಭದಲ್ಲಿ ಬಿಆರ್ ಎಸ್ ಆಡಳಿತ ಅವಧಿಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದ ಕವಿತಾ ಬಿಆರ್‌ಎಸ್ ಸಂವಿಧಾನವನ್ನು "ಜೋಕ್" ಎಂದೂ ಕರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



