27 ವರ್ಷದಲ್ಲಿ 3 ಗಗನ ಯಾತ್ರೆ; 608 ದಿನಗಳ ಬಾಹ್ಯಾಕಾಶ ವಾಸ: ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ!
ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ ಮಂಗಳವಾರ ಘೋಷಣೆ ಮಾಡಿದೆ. ಅವರು 27 ವರ್ಷಗಳ ಕಾಲ ನಾಸಾದ ಗಗನಯಾನಿಯಾಗಿದ್ದರು.

ನವದೆಹಲಿ: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆ
ಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು. ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ 9 ತಿಂಗಳು ಅಲ್ಲಿಯೇ ಸಿಲುಕಿದ್ದರು.
ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ ಮಂಗಳವಾರ ಘೋಷಣೆ ಮಾಡಿದೆ. ಅವರು 27 ವರ್ಷಗಳ ಕಾಲ ನಾಸಾದ ಗಗನಯಾನಿಯಾಗಿದ್ದರು.
ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅವರ ಸೇವೆ ಅಸಾಧಾರಣವಾದುದು, ಅವರ ಯೋಜನೆಗಳು ಚಂದ್ರ ಮತ್ತು ಮಂಗಳ ಗ್ರಹದತ್ತ ತೆರಳುವ ನಮ್ಮ ಪ್ರಯತ್ನಗಳಿಗೆ ಭದ್ರ ಅಡಿಪಾಯ ಹಾಕಿದೆ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿವೆ. ನಾಸಾ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಸೇವೆಗೆ ಧನ್ಯವಾದಗಳು ಎಂದು ನಾಸಾದ ಆಡಳಿತಾಧಿಕಾರಿ ಜಾರೆಡ್ ಐಸಾಕ್‌ಮ್ಯಾನ್ ಹೇಳಿದರು. ಬಾಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ, ಅವರು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಇರಬೇಕಾಯಿತು. ಭಾರತದ ಜನರು ಸಹ ಅವರ ಸುರಕ್ಷಿತ ಮರಳುವಿಕೆಗಾಗಿ ಪ್ರಾರ್ಥಿಸುತ್ತಿದ್ದರು.
ಸುನಿತಾ ವಿಲಿಯಮ್ಸ್ ಅವರು 1998ರಲ್ಲಿ ಗಗನಯಾನಿ ಆಗಿ ನಾಸಾ ಸೇರಿದರು. ಅವರು 2006, 2022 ಮತ್ತು 2024ರಲ್ಲಿ ಮೂರು ಬಾಹ್ಯಾಕಾಶ ಮಿಷನ್‌ಗಳನ್ನು ಪೂರೈಸಿದ್ದು 608 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ.
ವಿಲಿಯಮ್ಸ್ ಅವರು ಒಟ್ಟು ಒಂಬತ್ತು ಬಾಹ್ಯಾಕಾಶ ನಡಿಗೆಗಳನ್ನು ಪೂರ್ಣಗೊಳಿಸಿದ್ದು, 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶ ನಡಿಗೆ ನಡೆಸಿದ್ದಾರೆ. ಬಾಹ್ಯಾಕಾಶದಲ್ಲೇ ಮ್ಯಾರಥಾನ್ ಓಡಿದ ಮೊದಲಿಗರು ಆಗಿದ್ದಾರೆ.
ಸುನಿತಾ ಅವರ ಪೂರ್ವಜರು ಗುಜರಾತ್‌ನ ಮೆಹಸಾನಾ ಜಿಲ್ಲೆಯ ಜುಲಾಸನ್ ಗ್ರಾಮದವರು. ಇವರ ತಂದೆ ದೀಪಕ್ ಪಾಂಡ್ಯಾ ಅವರು 1953ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಇಂಟರ್‌ಮಿಡಿಯೇಟ್ ಸೈನ್ಸ್ ಪೂರ್ಣಗೊಳಿಸಿದರು. ನಂತರ ಅಮೆರಿಕದ ಒಹಿಯೊದ ಕ್ಲೆವ್‌ಲ್ಯಾಂಡ್‌ನಲ್ಲಿ ವೈದ್ಯಕೀಯ ವಿಜ್ಞಾನ ವಿಷಯದಲ್ಲಿ ಇಂಟರ್ನ್‌ಶಿಪ್ ಪೂರ್ಣಗೊಳಿಸಿದರು. ನಂತರ 1964ರಲ್ಲಿ ವೆಸ್ಟರ್ನ್ ರಿಸರ್ವ್ ವಿಶ್ವವಿದ್ಯಾಲಯದಲ್ಲಿ ಶರೀರಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
1957ರಲ್ಲೇ ಪಾಂಡ್ಯಾ ಅವರು ಅಮೆರಿಕದಲ್ಲಿ ನೆಲೆಸಿರುವ ಸ್ಲೊವೆನಿಯಾ ಮೂಲದ ಉರ್ಸುಲಿನ್ ಬೊನ್ನಿ ಝಲೊಕಾರ್ ಅವರನ್ನು ವಿವಾಹವಾದರು. ಈ ದಂಪತಿಗೆ ಸುನಿತಾ 1965ರಲ್ಲಿ ಜನಿಸಿದರು. ವಿಲಿಯಮ್ಸ್ ಮ್ಯಾಸಚೂಸೆಟ್ಸ್‌ನ ನೀಡ್‌ಹ್ಯಾಮ್‌ನಲ್ಲಿ ಬೆಳೆದರು. ನೀಡ್‌ಹ್ಯಾಮ್ ಹೈಸ್ಕೂಲ್‌ನಲ್ಲಿ ತಮ್ಮ ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಮಾಡಿದರು ಮತ್ತು 1983 ರಲ್ಲಿ ಅಲ್ಲಿಂದ ಪದವಿ ಪಡೆದರು. ಅವರು 1987 ರಲ್ಲಿ ಯುನೈಟೆಡ್ ಸ್ಟೇಟ್ಸ್ ನೇವಲ್ ಅಕಾಡೆಮಿಯಿಂದ ಭೌತ ವಿಜ್ಞಾನದಲ್ಲಿ ವಿಜ್ಞಾನ ಪದವಿ ಪಡೆದರು. 1995 ರಲ್ಲಿ, ಅವರು ಫ್ಲೋರಿಡಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಂಜಿನಿಯರಿಂಗ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



