ದೇಶ

ಏಕಾಏಕಿ ಮುರಿದು ಬಿದ್ದ ವಿದ್ಯುತ್ ಕಂಬ: ಸ್ವಲ್ಪದರಲ್ಲೆ ಬಾಲಕ ಬಚಾವ್; Video viral

ಕೆಲವು ಹೆಜ್ಜೆಗಳು ದೂರ ಸಾಗಿದ್ದರೆ ಪ್ರಾಣಾಪಾಯ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ವಿಡಿಯೊ ಸಾಕಷ್ಟು ವೈರಲ್ ಆಗಿದೆ. ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಏಕಾಏಕಿ ಮುರಿದು ಬಿದ್ದ ವಿದ್ಯುತ್ ಕಂಬ: ಸ್ವಲ್ಪದರಲ್ಲೆ ಬಾಲಕ ಬಚಾವ್; Video viral
ವಿದ್ಯುತ್ ಕಂಬ ಬಿದ್ದು ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ
Published On :

ಆಂಧ್ರಪ್ರದೇಶದ ಕರ್ನೂಲಿನ ಅಶೋಕ್ ನಗರದಲ್ಲಿ ಶಾಲಾ ಬಾಲಕನೊಬ್ಬ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ವಿದ್ಯುತ್ ಕಂಬ ರಸ್ತೆಗೆ ಬಿದ್ದು, ವಿದ್ಯುತ್ ತಂತಿಗಳು ಕೆಲವು ಇಂಚುಗಳಷ್ಟು ದೂರದಲ್ಲಿ ಬಿದ್ದ ಪರಿಣಾಮ ಕೂದಲೆಳೆಯ ಅಂತರದಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇನ್ನೂ ಕೆಲವು ಹೆಜ್ಜೆಗಳು ದೂರ ಸಾಗಿದ್ದರೆ ಪ್ರಾಣಾಪಾಯ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ವಿಡಿಯೊ ಸಾಕಷ್ಟು ವೈರಲ್ ಆಗಿದೆ. ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (KMC) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ ಅಡಿಪಾಯವನ್ನು ದುರ್ಬಲಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.