ದೇಶ

ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು

ಪವಿತ್ರ ಸ್ನಾನ ಮಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿ ಜನವರಿ 18 ರಂದು ಸತ್ಯಾಗ್ರಹ ನಡೆಸಿದ್ದರು.

ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ
Published On :

ವಾರಣಾಸಿ: "ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತುಪಡಿಸಲು ರಾಜ್ಯದಿಂದ ಗೋಮಾಂಸ ರಫ್ತು ನಿಲ್ಲಿಸಿ ಮತ್ತು ಗೋವನ್ನು "ರಾಷ್ಟ್ರ ಮಾತೆ" ಎಂದು ಘೋಷಿಸುವಂತೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದ್ದಾರೆ.

ಪ್ರಯಾಗರಾಜ್‌ನ ಸಂಗಮದಲ್ಲಿ ಪವಿತ್ರ ಸ್ನಾನ ಮಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿ ಜನವರಿ 18 ರಂದು ಶಂಕರಾಚಾರ್ಯ ಕ್ಯಾಂಪ್ ನಲ್ಲಿ ಸತ್ಯಾಗ್ರಹ ನಡೆಸಿದ್ದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ನಾನು ಅಲ್ಲಿ 11 ದಿನಗಳ ಕಾಲ ಧರಣಿ ಕುಳಿತಿದ್ದಾಗ, ಯಾವುದೇ ಅಧಿಕಾರಿ ಸ್ನಾನ ಮಾಡುವಂತೆ ಹೇಳಲಿಲ್ಲ. ಈಗ ತುಂಬಾ ತಡವಾಗಿದೆ. ಮುಂದಿನ ವರ್ಷ ನಾನು ಮಾಘ ಮೇಳಕ್ಕೆ ಹೋಗಿ ಗೌರವಯುತವಾಗಿ ಪವಿತ್ರ ಸ್ನಾನ ಮಾಡುತ್ತೇನೆ" ಎಂದು ಹೇಳಿದರು.

ಇದೇ ವೇಳೆ, ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತುಪಡಿಸಲು 40 ದಿನಗಳಲ್ಲಿ ಗೋಹತ್ಯೆಯನ್ನು ನಿಲ್ಲಿಸಿ, ಆಗ ನೀವೊಬ್ಬ ಹಿಂದೂ ಅನುಯಾಯಿ ಎನ್ನುವುದನ್ನು ಒಪ್ಪಿಕೊಳ್ಳುತ್ತೇವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.