ಜೈಲಲ್ಲಿ ಬಾಯ್‌ಫ್ರೆಂಡ್ ಜೊತೆ ರೀಲ್ಸ್ ಮಾಡಿದ ಯುವತಿ: ಕಾರಾಗೃಹ ಭದ್ರತೆ ಬಗ್ಗೆ ಚರ್ಚೆ!
ಹೊರಗಡೆಯಿಂದ ಯಾರು ಕೂಡ ಜೈಲಿನೊಳಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಯುವತಿ ಜೈಲಿನ ಸಂದರ್ಶಕ ಕೋಣೆಯೊಳಗೆ ಮುಕ್ತವಾಗಿ ವೀಡಿಯೋ ರೆಕಾರ್ಡ್ ಮಾಡಿ ಹರಿಬಿಟ್ಟಿದ್ದಾಳೆ.

ಭೂಪಾಲ್: ಅತ್ಯಂತ ಸುರಕ್ಷಿತ ಸಂಸ್ಥೆಗಳಲ್ಲಿ ಒಂದಾಗಿರುವ ರಾಯ್‌ಪುರ ಕೇಂದ್ರ ಕಾರಾಗೃಹದಲ್ಲಿ ತನ್ನ ಗೆಳೆಯನನ್ನು ಭೇಟಿಯಾಗಲು ಬಂದ ಯುವತಿಯೊಬ್ಬಳು ಜೈಲಿನ ಸಂದರ್ಶಕ ಕೋಣೆಯೊಳಗೆ ಮುಕ್ತವಾಗಿ ವೀಡಿಯೊ ರೆಕಾರ್ಡ್ ಮಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಜೈಲಿನಲ್ಲಿರುವ ತನ್ನ ಪ್ರಿಯಕರನ ಭೇಟಿಯಾಗಲು ಬಂದ ಯುವತಿ ರೀಲ್ಸ್ ಮಾಡಿ ಹರಿಬಿಟ್ಟಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆ ಜೈಲಿನ ಭದ್ರತೆ ಮತ್ತು ಮೇಲ್ವಿಚಾರಣೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಹೊರಗಡೆಯಿಂದ ಯಾರು ಕೂಡ ಜೈಲಿನೊಳಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಯುವತಿ ಜೈಲಿನ ಸಂದರ್ಶಕ ಕೋಣೆಯೊಳಗೆ ಮುಕ್ತವಾಗಿ ವೀಡಿಯೋ ರೆಕಾರ್ಡ್ ಮಾಡಿ ಹರಿಬಿಟ್ಟಿದ್ದಾಳೆ. ನೆಟ್ಟಿಗರು ಜೈಲಿನ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಯುವತಿ ಭಾವನಾತ್ಮಕವಾಗಿ ಕ್ಯಾಮೆರಾದ ಮುಂದೆ ಮಾತನಾಡುತ್ತಾ, ‘ಇಂದು ನನ್ನ ಲವ್ವರ್ ಹುಟ್ಟುಹಬ್ಬ. ನಾನು ಅವನನ್ನು ಭೇಟಿಯಾಗಲು ಜೈಲಿಗೆ ಬಂದಿದ್ದೇನೆ. ಅವನು ನನ್ನೊಂದಿಗೆ ಇಲ್ಲದಿರುವುದು ತುಂಬಾ ನೋವುಂಟುಮಾಡುತ್ತದೆ. ಅವನ ಹುಟ್ಟುಹಬ್ಬದಂದು ನಾನು ಅವನೊಂದಿಗೆ ಇಲ್ಲ. ಆದರೆ, ನಾನು ಅವನನ್ನು ಭೇಟಿಯಾಗಲು ಬಂದಿದ್ದೇನೆ. ಅವನ ಪ್ರತಿಕ್ರಿಯೆ ಏನೆಂದು ನೋಡೋಣ’ ಎಂದು ಹೇಳಿದ್ದಾಳೆಂದು ವರದಿಯಾಗಿದೆ.
ವಿಸಿಟಿಂಗ್ ರೂಂ ನಲ್ಲಿ ತನ್ನ ಗೆಳೆಯನೊಂದಿಗೆ ಸಂಭಾಷಣೆ ನಡೆಸುತ್ತಿರುವಾಗ ವೀಡಿಯೊವನ್ನು ಚಿತ್ರೀಕರಿಸಿ ನಂತರ ಆಕೆಯ ಸಾಮಾಜಿಕ ಮಾಧ್ಯಮ ಖಾತೆಗೆ ಅಪ್‌ಲೋಡ್ ಮಾಡಲಾಗಿದೆ. ಕೈದಿಯನ್ನು ತಾರಕೇಶ್ವರ ಎಂದು ಗುರುತಿಸಲಾಗಿದ್ದು, ಪ್ರಸ್ತುತ ರಾಯ್‌ಪುರ ಕೇಂದ್ರ ಕಾರಾಗೃಹದಲ್ಲಿ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್) ಕಾಯ್ದೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



