ದೇಶ

ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಆಯ್ಕೆ, ಸಂಜೆ ಮಹಾರಾಷ್ಟ್ರ DCM ಆಗಿ ಪ್ರಮಾಣ

ಇಂದು ಮುಂಬೈನಲ್ಲಿ ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕಿ ಸ್ಥಾನಕ್ಕೆ ಪ್ರಸ್ತಾಪಿಸಿದರು.

ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಆಯ್ಕೆ, ಸಂಜೆ ಮಹಾರಾಷ್ಟ್ರ DCM ಆಗಿ ಪ್ರಮಾಣ
ಸುನೇತ್ರಾ ಪವಾರ್ ಆಯ್ಕೆ
Published On :

ಮುಂಬೈ: ಇತ್ತೀಚಿಗೆ ವಿಮಾನ ಪತನದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಶನಿವಾರ ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಇಂದು ಮುಂಬೈನಲ್ಲಿ ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕಿ ಸ್ಥಾನಕ್ಕೆ ಪ್ರಸ್ತಾಪಿಸಿದರು ಮತ್ತು ಇತರ ಹಿರಿಯ ನಾಯಕರು ಅದನ್ನು ಅನುಮೋದಿಸಿದರು.

ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುವ ಸುನೇತ್ರಾ ಪವಾರ್ ಅವರು ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2024ರಲ್ಲಿ ಎನ್ ಸಿಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಸುನೇತ್ರಾ ಪವಾರ್ ಅವರನ್ನು ಜೂನ್ 18, 2024 ರಂದು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.

ಇದೀಗ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಸುನೇತ್ರಾ ಅವರು, ಪತಿ ಅಜಿತ್ ಪವಾರ್ ಅವರು ವಹಿಸಿಕೊಂಡಿದ್ದ ಹಣಕಾಸು, ಅಬಕಾರಿ ಹಾಗೂ ಕ್ರೀಡಾ ಸೇರಿದಂತೆ ಪ್ರಮುಖ ಖಾತೆಗಳನ್ನು ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶುಕ್ರವಾರ ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್, ರಾಜ್ಯಾಧ್ಯಕ್ಷ ಸುನಿಲ್ ತಟಕರೆ, ಸಚಿವ ಛಗನ್ ಭುಜಬಲ್ ಹಾಗೂ ಮಾಜಿ ಸಚಿವ ಧನಂಜಯ ಮುಂಡೆ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಈ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿದ್ದರು.

ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗುವುದು ಎಂದು ಅವರು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.