ಅಟಲ್ ಸುರಂಗದ ಬಳಿ ಭಯಾನಕ ಅಪಘಾತ; ಕಂಬಿಗಳ ನಡುವೆ ಸಿಲುಕಿದ SUV ಕಾರು! Video ನೋಡಿ
ಅತೀ ವೇಗವಾಗಿ ಬಂದ ಮಹೀಂದ್ರಾ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದು ರಸ್ತೆಯಿಂದಾಚೆಗೆ ನೆಗೆದಿದೆ.

ಶಿಮ್ಲಾ: ಹಿಮಾಚಲ ಪ್ರದೇಶದ ಅಟಲ್ ಸುರಂಗದ ಉತ್ತರ ದ್ವಾರದ ಬಳಿ ಭಯಾನಕ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಬ್ಬ ಪ್ರವಾಸಿ ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಅತೀ ವೇಗವಾಗಿ ಬಂದ ಮಹೀಂದ್ರಾ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದು ರಸ್ತೆಯಿಂದಾಚೆಗೆ ನೆಗೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಪಕ್ಕದ ನಿರ್ಮಾಣದ ಹಂತದ ಕಟ್ಟಡದ ಕಬ್ಬಿಣದ ಸರಳುಗಳ ನಡುವೆ ಸಿಲುಕಿದ್ದು, ಕಂಬಿಗಳು ಚುಚ್ಚಿ ನಜ್ಜುಗುಜ್ಜಾಗಿದೆ.
ಪೊಲೀಸರ ಪ್ರಕಾರ, ರಾತ್ರಿ 10 ಗಂಟೆ ಸುಮಾರಿಗೆ ಪ್ರವಾಸಿಗರ ಈ ಕಾರು, ಮನಾಲಿಯಿಂದ ಲಹೌಲ್‌ಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಅಪಘಾತದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಅಟಲ್ ಸುರಂಗದಿಂದ ಕಾರು ಹೊರಬರುತ್ತಿದ್ದಂತೆ, ಚಾಲಕ ಎಸ್‌ಯುವಿ ನಿಯಂತ್ರಣ ಕಳೆದುಕೊಂಡಿದ್ದಾನೆ. ಬಳಿಕ ರಸ್ತೆ ಬದಿಯ ಬ್ಯಾರಿಕೇಡ್‌ಗಳಿಗೆ ಗುದ್ದಿಸಿಕೊಂಡು, ನಿರ್ಮಾಣ ಹಂತದ ಸೇತುವೆಯ ಮೇಲೆ ಬಿದ್ದಿದೆ.
ಅಟಲ್ ಸುರಂಗದ ದಕ್ಷಿಣದ ಹೆಬ್ಬಾಗಿಲು ಮನಾಲಿಯಿಂದ 25 ಕಿ.ಮೀ ದೂರದಲ್ಲಿ 3,060 ಮೀಟರ್ ಎತ್ತರದಲ್ಲಿದೆ. ಸುರಂಗದ ಉತ್ತರದ ಹೆಬ್ಬಾಗಿಲು ಲಾಹೌಲ್ ಕಣಿವೆಯ ಸಿಸ್ಸು ಎಂಬ ಹಳ್ಳಿಯ ಟೆಲ್ಲಿಂಗ್ ಬಳಿ ಇದ್ದು, ಇದು 3,071 ಮೀಟರ್ ಎತ್ತರದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



