ಅಸ್ವಸ್ಥ ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು 6 ಕಿ.ಮೀ ನಡೆದು, ಆಸ್ಪತ್ರೆಗೆ ಸೇರಿಸಿದ ಶಿಕ್ಷಕಿ! Video
ಶಿಕ್ಷಕಿಯೊಬ್ಬರು ತನ್ನ ಬೆನ್ನ ಮೇಲೆ ಅಸ್ವಸ್ಥ ಬಾಲಕಿಯನ್ನು ಹೊತ್ತುಕೊಂಡು ಕಲ್ಲುಮುಳ್ಳುಗಳಿಂದ ಕೂಡಿದ್ದ ರಸ್ತೆಯಲ್ಲಿ ಸುಮಾರು 6 ಕಿಲೋ ಮೀಟರ್ ನಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾರ್ವತಿಪುರ: ಶಿಕ್ಷಕರು ವಿದ್ಯಾರ್ಥಿಗಳ ನಡುವಣ ಸಂಬಂಧ ಎಂತಹದ್ದು ಎಂಬುದಕ್ಕೆ ನೆರೆಯ ಆಂಧ್ರಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಸಾಕ್ಷಿಯಂತಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಏಳನೇ ತರಗತಿಯ ಬಾಲಕಿಯ ಜೀವ ಉಳಿಸಲು ಶಿಕ್ಷಕಿ ಮಾಡಿದ ಕಾರ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಹೌದು. ಶಿಕ್ಷಕಿಯೊಬ್ಬರು ತನ್ನ ಬೆನ್ನ ಮೇಲೆ ಅಸ್ವಸ್ಥ ಬಾಲಕಿಯನ್ನು ಹೊತ್ತುಕೊಂಡು ಕಲ್ಲುಮುಳ್ಳುಗಳಿಂದ ಕೂಡಿದ್ದ ರಸ್ತೆಯಲ್ಲಿ ಸುಮಾರು 6 ಕಿಲೋ ಮೀಟರ್ ನಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಶಿಕ್ಷಕಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಆಂಧ್ರ ಪ್ರದೇಶದ ಪಾರ್ವತಿಪುರ ಮಣ್ಯಂಜಿಲ್ಲೆಯ ಗುಮ್ಮಲಕ್ಷ್ಮಿಪುರದಲ್ಲಿರುವ ಆದಿವಾಸಿ ಬಾಲಕಿಯರ ಕಲ್ಯಾಣ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಲ್ಲಿ ವ್ಯಾಸಂಗ ಮಾಡುತ್ತಿರುವ 7ನೇ ತರಗತಿ ವಿದ್ಯಾರ್ಥಿನಿ ಭುವನೇಶ್ವರಿ ದಿಢೀರನ್ನೆ ಅಸ್ವಸ್ಥಗೊಂಡಿದ್ದಾಳೆ.
ಆಸ್ಪತ್ರೆಗೆ ಕಳುಹಿಸಲು ಯಾವುದೇ ಸಾರಿಗೆ ವ್ಯವಸ್ಥೆಯಿಲ್ಲದೇ ಶಾಲಾ ಸಿಬ್ಬಂದಿ ಏನು ಮಾಡುವುದು ಎಂದು ಯೋಚಿಸುತ್ತಿದ್ದಾಗ ಶಿಕ್ಷಕಿ ಹೇಮನಿ, ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು ಕಲ್ಲುಮುಳ್ಳುಗಳಿಂದ ಕೂಡಿದ ರಸ್ತೆಯಲ್ಲಿ ಸಾಗಿ ಜಿಲ್ಲಾ ಆಸ್ಪತ್ರೆ ತಲುಪಿದ್ದಾರೆ. ಸದ್ಯ ಬಾಲಕಿ ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಶಿಕ್ಷಕಿ ನಡೆಗೆ ಪ್ರಶಂಸೆಯ ಸುರಿಮಳೆಯಾಗುತ್ತಿದ್ದು, ಆಂಧ್ರಪ್ರದೇಶ ಮಹಿಳಾ ಮತ್ತು ಮಕ್ಕಳ ಇಲಾಖೆ ಹೇಮನಿ ಅವರನ್ನು ಕರೆದು ಸನ್ಮಾನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



