ರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್
ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನಕ್ಕೆ ಸಂಬಂಧಿಸಿದಂತೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ. ರಾಮ ಜನ್ಮಭೂಮಿ ಸಂಕೀರ್ಣದೊಳಗಿನ ಅತಿಥಿಗೃಹದಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನಕ್ಕೆ ಸಂಬಂಧಿಸಿದಂತೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ. ರಾಮ ಜನ್ಮಭೂಮಿ ಸಂಕೀರ್ಣದೊಳಗಿನ ಅತಿಥಿಗೃಹದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ. ಅನಿಲ್ ಮಿಶ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಲಾಯಿತು.
ಘಟನೆಯಿಂದ ತಮಗೆ ತೀವ್ರ ನೋವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಪಾಪದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುತ್ತಾರೆ ಎಂದು ಆಶಿಸುತ್ತೇನೆ. ಅಲ್ಲದೆ ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಇದು ಲಕ್ಷಾಂತರ ಹಿಂದೂಗಳ ನಂಬಿಕೆಗೆ ಸಂಬಂಧಿಸಿದೆ ಎಂದು ಜನರನ್ನು ಟ್ರಸ್ಟ್ ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಒತ್ತಾಯಿಸಿದರು.
ಚಂಪತ್ ರಾಯ್ ಅವರ ರಾಜೀನಾಮೆಯ ನಂತರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿವೃತ್ತ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಕೃಷ್ಣ ಮೋಹನ್ ಅವರನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದೆ, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಮೇಲ್ವಿಚಾರಣೆ ಮಾಡುವ ಸಂಸ್ಥೆಯ ದೈನಂದಿನ ಆಡಳಿತವನ್ನು ಅವರಿಗೆ ವಹಿಸಿದೆ. ಕೃಷ್ಣ ಮೋಹನ್ ಅವರನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸುವುದರ ಜೊತೆಗೆ, ಟ್ರಸ್ಟ್ ತನ್ನ ಕಾರ್ಯನಿರ್ವಹಣೆಯನ್ನು ಬಲಪಡಿಸುವ ಮತ್ತು ವಿವಾದದ ಪರಿಣಾಮಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ಸಮಗ್ರ ಆಡಳಿತಾತ್ಮಕ ಪರಿಶೀಲನೆಯನ್ನು ಸಹ ಘೋಷಿಸಿದೆ.
ಟ್ರಸ್ಟ್ ಸದಸ್ಯರ ಸರ್ವಾನುಮತದ ನಿರ್ಧಾರದ ಮೂಲಕ ಟ್ರಸ್ಟಿಯಾಗಿ ನೇಮಕಗೊಂಡಿರುವ ಕೃಷ್ಣ ಮೋಹನ್, ಉತ್ತರ ಪ್ರದೇಶದ ಹಾರ್ದೋಯ್ ಜಿಲ್ಲೆಯ ಶಹಾಬಾದ್ ವಿಧಾನಸಭಾ ಕ್ಷೇತ್ರದ ಚಂದ್ರಾಪುರ ಗ್ರಾಮದವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



