ದೇಶ

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!

ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದ ಕೇರಳ ಮುಖ್ಯಮಂತ್ರಿ ವಿ ಡಿ ಸತೀಶನ್ ಅವರು, ನಿರ್ಮಾಣ ಸ್ಥಳದ ಬಳಿ ಸಂಗ್ರಹವಾದ ಮಣ್ಣು ತೆರವುಗೊಳಿಸುವಂತೆ ಗುತ್ತಿಗೆದಾರರಿಗೆ ಸರ್ಕಾರ ಪದೇ ಪದೇ ನಿರ್ದೇಶನಗಳನ್ನು ನೀಡಿದೆ ಎಂದರು.

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!
ವಯನಾಡು ಭೂಕುಸಿತ
Published On :

ವಯನಾಡು: ಮುಂಡಕ್ಕೈ-ಚೂರಲ್ಮಲಾ ದುರಂತ ಮಾಸುವ ಮುನ್ನವೇ ಕೇರಳದ ವಯನಾಡಿನಲ್ಲಿ ಮಂಗಳವಾರ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ ಮತ್ತು ಇತರ ಏಳು ಜನ ಇನ್ನೂ ಕಾಣೆಯಾಗಿದ್ದಾರೆ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಲಪ್ಪುರಂ ಮತ್ತು ವಯನಾಡು ಜಿಲ್ಲೆಗಳನ್ನು ಸಂಪರ್ಕಿಸುವ ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ಯೋಜನೆಯ ಕೆಲಸ ನಡೆಯುತ್ತಿರುವ ಮೀನಾಕ್ಷಿ ಸೇತುವೆಯ ಬಳಿ ಈ ದುರಂತ ಸಂಭವಿಸಿದೆ.

ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದ ಕೇರಳ ಮುಖ್ಯಮಂತ್ರಿ ವಿ ಡಿ ಸತೀಶನ್ ಅವರು, ನಿರ್ಮಾಣ ಸ್ಥಳದ ಬಳಿ ಸಂಗ್ರಹವಾದ ಮಣ್ಣು ತೆರವುಗೊಳಿಸುವಂತೆ ಗುತ್ತಿಗೆದಾರರಿಗೆ ಸರ್ಕಾರ ಪದೇ ಪದೇ ನಿರ್ದೇಶನಗಳನ್ನು ನೀಡಿದೆ. ಇದರ ಹೊರತಾಗಿಯೂ ಅವರು ಮಣ್ಣು ತೆರವುಗೊಳಿಸಿಲ್ಲ ಎಂದು ದೂಷಿಸಿದರು.

ಮೀನಂಗಡಿಯ, ಕೋಝಿಕ್ಕೋಡ್‌ನ ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿವೆ. ಸುರಂಗ ರಸ್ತೆಯ ಬಳಿ ಉಂಟಾದ ಭೂಕುಸಿತದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಒಬ್ಬರು ಸಾವನ್ನಪ್ಪಿದ್ದಾರೆ, 7 ಜನ ಕಾಣೆಯಾಗಿದ್ದಾರೆ. 7 ಮಂದಿಯನ್ನ ರಕ್ಷಣೆ ಮಾಡಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಸುರಂಗ ರಸ್ತೆ ನಿರ್ಮಾಣ (Wayanad Tunnel Road Project) ಪ್ರದೇಶದಿಂದ ಮಣ್ಣನ್ನ ತೆಗೆಯಲು ಗುತ್ತಿಗೆದಾರರಿಗೆ ಜೂನ್‌ 20 ರಂದೇ ಹೇಳಲಾಗಿತ್ತು. ವಿಪತ್ತು ನಿರ್ವಹಣಾ ಇಲಾಖೆ ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗಳು ಈ ಸಂಬಂಧ ಆದೇಶ ಹೊರಡಿಸಿದ್ದರು. ಲೋಕೋಪಯೋಗಿ ಇಲಾಖೆ ಸಚಿವರೂ ಗುತ್ತಿಗೆದಾರರಿಗೆ ತಾಕೀತು ಮಾಡಿದ್ದರು. ಆದ್ರೆ ಗುತ್ತಿಗೆದಾರರು ಆದೇಶ ಪಾಲಿಸಿಲ್ಲ. ಇದರ ಪರಿಣಾಮ ಇಂದು ದುರಂತ ಸಂಭವಿಸಿದೆ ಎಂದು ಸತೀಶನ್ ವಿವರಿಸಿದ್ದಾರೆ.

ಹಲವಾರು ಸಚಿವರು ಈ ಭೂಕುಸಿತವನ್ನು "ಅಗೆದ ಮಣ್ಣಿನ ಅವೈಜ್ಞಾನಿಕ ಸುರಿಯುವಿಕೆ" ಯಿಂದ ಉಂಟಾದ "ಮಾನವ ನಿರ್ಮಿತ" ವಿಪತ್ತು ಎಂದು ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಮತ್ತು ಕಲ್ಪೆಟ್ಟ ಶಾಸಕ ಸಿದ್ದಿಕ್ ಅವರು, ವಿಮ್ಸ್ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

"ಇದು ನೈಸರ್ಗಿಕ ಭೂಕುಸಿತವಲ್ಲ. ಇದು ಮಾನವ ನಿರ್ಮಿತ. ಇದು ಅಗೆದ ಮಣ್ಣನ್ನು ಅವೈಜ್ಞಾನಿಕವಾಗಿ ಸುರಿದಿದ್ದರಿಂದ ಸಂಭವಿಸಿದೆ" ಎಂದು ಅವರು ತಿಳಿಸಿದ್ದಾರೆ.

"ಇದು ಏಕೆ ಸಂಭವಿಸಿತು ಮತ್ತು ಹಿಂದಿನ ನಿರ್ದೇಶನಗಳನ್ನು ಏಕೆ ಪಾಲಿಸಲಿಲ್ಲ ಎಂಬುದನ್ನು ಸರ್ಕಾರ ಪರಿಶೀಲಿಸುತ್ತದೆ" ಎಂದು ಸಿದ್ದಿಕ್ ಹೇಳಿದ್ದಾರೆ.

2024 ರ ಭೂಕುಸಿತದಿಂದ ಬದುಕುಳಿದವರಿಗೆ ಮನೆಗಳನ್ನು ನಿರ್ಮಿಸಲಾಗುತ್ತಿರುವ ವಯನಾಡ್ ಟೌನ್‌ಶಿಪ್ ಯೋಜನೆಯಲ್ಲಿಯೂ ಅಗೆದ ಮಣ್ಣನ್ನು ಇದೇ ರೀತಿ ಸುರಿಯಲಾಗಿದೆ ಎಂದು ಅವರು ಹೇಳಿದರು.

ಕಳೆದ 24 ಗಂಟೆಗಳಲ್ಲಿ ವಯನಾಡ್‌ನಲ್ಲಿ 256 ಮಿಮೀ ಮಳೆಯಾಗಿದೆ ಎಂದು ಸಿದ್ದಿಕ್ ತಿಳಿಸಿದರು.

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಈಗಾಗಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ವಯನಾಡ್ ಜಿಲ್ಲಾಧಿಕಾರಿ ಸ್ಥಳಕ್ಕೆ ತಲುಪಿದ್ದಾರೆ ಮತ್ತು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶೇಖರ್ ಕುರಿಯಾಕೋಸ್ ಅವರೂ ಸ್ಥಳದಲ್ಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.