ದೇಶ

ಪತ್ನಿ, ಇಬ್ಬರು ಮಕ್ಕಳು ಸೇರಿ ಆರು ಜನರನ್ನು ಬರ್ಬರವಾಗಿ ಹತ್ಯೆಗೈದಿದ್ದ ಪಾಪಿ ಆತ್ಮಹತ್ಯೆಗೆ ಶರಣು!

ಇಂದು ಮಧ್ಯಾಹ್ನ ರಂಗಾರೆಡ್ಡಿ ಜಿಲ್ಲೆಯ ಕೊತ್ತೂರು ಮಂಡಲದ ಪೆಂಜೆರ್ಲಾ ಗ್ರಾಮದಲ್ಲಿ ರಾಜ್ ಕುಮಾರ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿ, ಇಬ್ಬರು ಮಕ್ಕಳು ಸೇರಿ ಆರು ಜನರನ್ನು ಬರ್ಬರವಾಗಿ ಹತ್ಯೆಗೈದಿದ್ದ ಪಾಪಿ ಆತ್ಮಹತ್ಯೆಗೆ ಶರಣು!
ರಾಜ್ ಕುಮಾರ್
Published On :

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ, ತನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ತನ್ನ ವಿರೋಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಬಾಲಕಿ ಸೇರಿದಂತೆ ಆರು ಜನರನ್ನು ಭೀಕರವಾಗಿ ಕೊಲೆ ಮಾಡಿದ್ದ ಪೋಕ್ಸೋ ಪ್ರಕರಣದ ಆರೋಪಿ ರಾಜ್ ಕುಮಾರ್ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಂದು ಮಧ್ಯಾಹ್ನ ರಂಗಾರೆಡ್ಡಿ ಜಿಲ್ಲೆಯ ಕೊತ್ತೂರು ಮಂಡಲದ ಪೆಂಜೆರ್ಲಾ ಗ್ರಾಮದಲ್ಲಿ ರಾಜ್ ಕುಮಾರ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೆಂಜರ್ಲಾ ಗ್ರಾಮದಲ್ಲಿ ರಾಜ್ ಕುಮಾರ್ ಶವವನ್ನು ಗಮನಸಿದಿ ನಿವಾಸಿಗಳು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವದ ಬಳಿ ವಿಷದ ಬಾಟಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ರೈತ ಪಿ ರಾಜ್‌ಕುಮಾರ್(35) ಕಳೆದ ಶುಕ್ರವಾರ ತಡರಾತ್ರಿ ಆರು ಜನರನ್ನು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹಾಗೂ ಇನ್ನೊಂದು ಕುಟುಂಬದ ಇತರ ಮೂವರು ಸದಸ್ಯರನ್ನು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಯು ತನ್ನ ಪತ್ನಿ ಸರಿತಾ, ಇಬ್ಬರು ಮಕ್ಕಳು ಹಾಗೂ ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಬಾಲಕಿ, ಆಕೆಯ ತಾಯಿ ಮತ್ತು ಆಕೆಯ ಅಜ್ಜಿಯನ್ನು ಚಾಕುವಿನಿಂದ ಇರಿದು ಕೊಂದಿದ್ದನು. ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಕೋಪಗೊಂಡು ರಾಜ್‌ಕುಮಾರ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಸುಮಾರು 10 ವಿಶೇಷ ತಂಡಗಳನ್ನು ರಚಿಸಿ ಆತನನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.

ಇದೀಗ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಆತನ ಶವವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.