ದೇಶ

Video: ಚಲಿಸುತ್ತಿದ್ದ ಬಸ್ ನಲ್ಲಿ ಜಿಪ್ ಬಿಚ್ಚಿ ಯುವತಿಗೆ ಮರ್ಮಾಂಗ ಸ್ಪರ್ಶ; ಚಳಿ ಬಿಡಿಸಿದ ಯುವತಿ!

ಪ್ರಯಾಣದ ವೇಳೆ ಯುವತಿಯ ಬಳಿ ಬಂದ ಆರೋಪಿ, ಆಕೆಯ ಎದುರು ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಯುವತಿ ತೀವ್ರ ಆತಂಕಕ್ಕೊಳಗಾಗಿದ್ದಾರೆ.

Video: ಚಲಿಸುತ್ತಿದ್ದ ಬಸ್ ನಲ್ಲಿ ಜಿಪ್ ಬಿಚ್ಚಿ ಯುವತಿಗೆ ಮರ್ಮಾಂಗ ಸ್ಪರ್ಶ; ಚಳಿ ಬಿಡಿಸಿದ ಯುವತಿ!
ಮರ್ಮಾಂಗ ಸ್ಪರ್ಶಿಸಿದ ದುಷ್ಕರ್ಮಿ ಚಳಿ ಬಿಡಿಸಿದ ಯುವತಿ!
Published On :

ಭೋಪಾಲ್: ಚಲಿಸುತ್ತಿದ್ದ ಬಸ್‌ನಲ್ಲಿ ದುಷ್ಕರ್ಮಿಯೋರ್ವ ಯುವತಿಯ ಎದುರು ಮಾರ್ಮಾಂಗ ಪ್ರದರ್ಶಿಸಿ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ದಿಯೋರಿ ಬಸ್ ನಿಲ್ದಾಣದಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಯುವತಿಯರ ಎದುರು ಯುವಕನೊಬ್ಬ ತನ್ನ ಮರ್ಮಾಂಗ ಪ್ರದರ್ಶಿಸಿದ್ದು, ಈ ವೇಳೆ ಸಿಟ್ಟಿಗೆದ್ದ ಯುವತಿ ಬಸ್ ನಲ್ಲೇ ಆತನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಈ ಘಟನೆ ಸಹ ಪ್ರಯಾಣಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೂಲಗಳ ಪ್ರಕಾರ ಸಾಗರ್ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಪ್ರಯಾಣದ ವೇಳೆ ಯುವತಿಯ ಬಳಿ ಬಂದ ಆರೋಪಿ, ಆಕೆಯ ಎದುರು ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಯುವತಿ ತೀವ್ರ ಆತಂಕಕ್ಕೊಳಗಾಗಿದ್ದಾರೆ.

ಯುವತಿ ಕೂಡಲೇ ಆರೋಪಿಯ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಲ್ಲದೆ ಸಹ ಪ್ರಯಾಣಿಕರಿಗೆ ವಿಷಯ ತಿಳಿಸಿದ್ದಾರೆ. ಇದರಿಂದ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಮಧ್ಯಪ್ರವೇಶಿಸಿ ಆರೋಪಿಯನ್ನು ಪ್ರಶ್ನಿಸಿದ್ದು, ಘಟನೆ ಕುರಿತು ಬಸ್ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪೊಲೀಸ್ ದೂರು ಕೂಡ ದಾಖಲಾಗಿದ್ದು, ದೂರು ದೊರೆತ ಬಳಿಕ ಬಸ್ ಅನ್ನು ನಿಲ್ಲಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಸಂಬಂಧಿತ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಯುವತಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಘಟನೆ ನಡೆದ ನಿಖರ ಸಂದರ್ಭ ಮತ್ತು ಆರೋಪಗಳ ಕುರಿತು ತನಿಖೆ ಮುಂದುವರಿದಿದೆ. ಈ ಘಟನೆಯನ್ನು ಇತರ ಪ್ರಯಾಣಿಕರು ನೋಡಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆದರೆ ಈ ವಿಡಿಯೋ ಬಸ್ ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪೊಲೀಸರ ಎಚ್ಚರಿಕೆ

ಇನ್ನು ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ಕಿರುಕುಳ ಅಥವಾ ಅಶ್ಲೀಲ ವರ್ತನೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.