ಪಂಜಾಬ್ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ನಾಯಕ ಮನೀಶ್ ತಿವಾರಿಗೆ ಬಿಜೆಪಿ ಗಾಳ? Video
ಪ್ರಧಾನಿ ಜೊತೆಗಿನ ಅವರ ಮಾತುಕತೆಯು ಎಲ್ಲರ ಗಮನ ಸೆಳೆದಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಭೇಟಿಯ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿವೆ.

ಚಂಡೀಘಡ: ಪಂಜಾಬ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಅವರೊಂದಿಗೆ ನಡೆಸಿದ ಮಾತುಕತೆಯು ರಾಜಕೀಯ ವಲಯದಲ್ಲಿ ಅನೇಕ ಉಹಾಪೋಹಗಳಿಗೆ ಕಾರಣವಾಗಿದೆ.
ಚಂಡೀಗಢದಲ್ಲಿ ನಡೆದ Rallyಯಲ್ಲಿ ಪ್ರಧಾನಿ ಮೋದಿ ಅವರು ತಿವಾರಿ ಅವರಿಗೆ ಹ್ಯಾಂಡ್ ಶೇಕ್ ಮಾಡಿದ್ದು, ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ಪಂಜಾಬ್ ಕಾಂಗ್ರೆಸ್‌ನಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ಅಮರಿಂದರ್ ಸಿಂಗ್ ರಾಜಾ ವಾರಿಂಗ್ ನಡುವಿನ ಆಂತರಿಕ ತಿಕ್ಕಾಟದ ನಡುವೆ ಈ ಬೆಳವಣಿಗೆ ನಡೆದಿದೆ.
ಚಂಡೀಗಢದ ಸಂಸದರಾಗಿರುವ ತಿವಾರಿ, ಅಧಿಕೃತ ಶಿಷ್ಟಾಚಾರದ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದಾಗ್ಯೂ, ಪ್ರಧಾನಿ ಜೊತೆಗಿನ ಅವರ ಮಾತುಕತೆಯು ಎಲ್ಲರ ಗಮನ ಸೆಳೆದಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಭೇಟಿಯ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿವೆ.
2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತಮಗೆ ಯಾವುದೇ ಜವಾಬ್ದಾರಿಯನ್ನು ನೀಡದಿರುವುದಕ್ಕೆ ತಿವಾರಿ ಇತ್ತೀಚೆಗಷ್ಟೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಈ ಭೇಟಿಯು ಮಹತ್ವ ಪಡೆದುಕೊಂಡಿದೆ.
ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ನಂತರ, ಬಿಜೆಪಿ ಕಾಂಗ್ರೆಸ್ ನಾಯಕನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರಬಹುದು ಎಂಬ ಊಹಾಪೋಹಗಳು ಹೆಚ್ಚಾಗಿವೆ. ಪ್ರಧಾನಿ ಮೋದಿ ಅವರು ತಿವಾರಿ ಅವರೊಂದಿಗೆ ಮಾತನಾಡಿದಾಗ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಅಲ್ಲಿ ಉಪಸ್ಥಿತರಿದ್ದರು.

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾರರಿಂದ 'ED ಪಕ್ಷ' ನಿರ್ನಾಮ; ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ! Video
2027ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಹೆಚ್ಚುತ್ತಿರುವ ಆಂತರಿಕ ಕಿತ್ತಾಟ ಶಮನಗೊಳಿಸುವ ನಿಟ್ಟಿನಲ್ಲಿ ಗುರುವಾರ ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಿರಿಯ ನಾಯಕರ ಪ್ರಮುಖ ಸಭೆ ನಡೆಯಿತು.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ರಾಜ್ಯ ಘಟಕವನ್ನು ಒಟ್ಟಿಗೆ ಕೊಂಡೊಯ್ಯಲು ವಿಫಲರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಪಕ್ಷದ ನಾಯಕತ್ವಕ್ಕೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


