ವಾಂಗ್‌ಚುಕ್ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು: ಅಣ್ಣಾ ಹಜಾರೆ
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್‌ಚುಕ್ ಆಗ್ರಹಿಸುತ್ತಿದ್ದಾರೆ.

ನವದೆಹಲಿ: ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ.
ಸರ್ಕಾರವು ಅವರ ತಾಳ್ಮೆಯನ್ನು ಪರೀಕ್ಷಿಸಬಾರದು. ಅವರ ಬೇಡಿಕೆಗಳಿಗೆ ಹೌದು ಅಥವಾ ಇಲ್ಲ ಎಂದು ಹೇಳಲಿ, ಆದರೆ ಚರ್ಚೆ ನಡೆಸುವುದರಲ್ಲಿ ತಪ್ಪೇನಿದೆ?" ಎಂದು ಹಜಾರೆ ವಿಡಿಯೋ ಸಂದೇಶವೊಂದರಲ್ಲಿ ತಿಳಿಸಿದ್ದಾರೆ.
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್‌ಚುಕ್ ಆಗ್ರಹಿಸುತ್ತಿದ್ದಾರೆ.
ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ 21ನೇ ದಿನದಂದು ಆರೋಗ್ಯ ಹದಗೆಟ್ಟಿದ್ದರಿಂದ, ದೆಹಲಿ ಪೊಲೀಸರು ಅವರನ್ನು ಶನಿವಾರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು.
2011ರಲ್ಲಿ ಲೋಕಪಾಲ ಕಾಯ್ದೆಗಾಗಿ ದೆಹಲಿಯಲ್ಲಿ ಅಣ್ಣಾ ಹಜಾರೆ ನಡೆಸಿದ್ದ ಉಪವಾಸ ಸತ್ಯಾಗ್ರಹವು ಆಗಿನ ಯುಪಿಎ (UPA) ಸರ್ಕಾರವನ್ನು ತಲ್ಲಣಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



