ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಪಟ್ಟು; Video
ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಅಧಿಕೃತ ನಿವಾಸದ ಎದುರು ನೆಲದ ಮೇಲೆ ಕುಳಿತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಸೋಮವಾರ ನಡೆಸಿದ "ಸಂಸತ್ ಚಲೋ" ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲ ಪ್ರಯೋಗ ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದ ಧರಣಿ ನಡೆಸುತ್ತಿದೆ.
ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಅಧಿಕೃತ ನಿವಾಸದ ಎದುರು ನೆಲದ ಮೇಲೆ ಕುಳಿತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಕಾಂಗ್ರೆಸ್‌ನ ಇತರ ನಾಯಕರು ಭಾಗವಹಿಸಿದ್ದರು.
ಪ್ರಧಾನಿ ವಿರುದ್ಧ ಘೋಷಣೆಗಳನ್ನು ಕೂಗಿದ ಪಕ್ಷದ ಹಲವಾರು ಸಂಸದರು ಮತ್ತು ನಾಯಕರು, "ನಿನ್ನೆ ಯುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿದರು. ಇದಕ್ಕೆ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
"ಭಾರತದ ಯುವಕರ ಭವಿಷ್ಯವನ್ನು ನಾಶಪಡಿಸಿದ್ದಕ್ಕಾಗಿ ಪ್ರಧಾನಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ, ʻನಿನ್ನೆ ಯುವ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸರ ಕ್ರೂರ ವರ್ತನೆ, ದೌರ್ಜನ್ಯಕ್ಕೆ ಪ್ರಧಾನಿ ಮೋದಿ ಅವರಿಂದ ಉತ್ತರ ಕೇಳಲು ನಾವಿಲ್ಲಿಗೆ ಬಂದಿದ್ದೇವೆ. ದೇಶದ ಯುವಜನರ ಭವಿಷ್ಯ ಹಾಳು ಮಾಡಿದ ಕಾರಣ ಪ್ರಧಾನಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕುʼ ಎಂದು ಆಗ್ರಹಿಸಿದ್ದಾರೆ.
ಇನ್ನೂ ಪ್ರಧಾನಿಯ ನಿವಾಸವು ಭದ್ರತಾ ವಲಯವಾಗಿರುವ ಹಿನ್ನೆಲೆಯಲ್ಲಿ ಧರಣಿ ಅಂತ್ಯಗೊಳಿಸುವಂತೆ ಪೊಲೀಸರು, ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ಆದರೆ ಪೊಲೀಸರ ಮನವಿಗೆ ಒಪ್ಪದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



