ಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್! Video
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ನವದೆಹಲಿ: ಕೇಂದ್ರ ಸರ್ಕಾರ ಯುವಜನತೆಯ ಹೋರಾಟವನ್ನು ಹತ್ತಿಕ್ಕುತ್ತಿದ್ದು, ಬಂಧನಕ್ಕೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ಈ ದೇಶದ ಯುವ ಜನತೆಯ ಭವಿಷ್ಯಕ್ಕಾಗಿ ಹೋರಾಟ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಯುವಜನತೆಯ ಹೋರಾಟ ಹತ್ತಿಕ್ಕುತ್ತಿರುವುದು ದುರಾದೃಷ್ಟಕರ. ನಮಗೆ ನ್ಯಾಯ ಬೇಕು. ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸುತ್ತೇವೆ ಎಂದು ಹೇಳಿದರು.
ಯುವ ಸಮೂಹ ಈ ದೇಶದ ಭವಿಷ್ಯ. ಹೋರಾಟ ಅವರ ಹಕ್ಕು. ಅವರಿಗೆ ರಕ್ಷಣೆ ನೀಡುವುದು ನಮ್ಮ ಸಂವಿಧಾನದ ಹಕ್ಕು. ನಾವೂ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದೇವೆ. ಈಗ ಬಲವಂತವಾಗಿ ಅವರು ನಮ್ಮನ್ನು ತಡೆಯಲು, ಬಂಧಿಸಲು ಪ್ರಯತ್ನಿಸುತ್ತಿದ್ದಾರೆ" ಎಂದರು.
ಬಂಧನಕ್ಕೆ ಹೆದರುವುದಿಲ್ಲ: ಸುಮಾರು ನೂರಕ್ಕೂ ಹೆಚ್ಚು ಸಂಸತ್ ಸದಸ್ಯರು ಸೇರಿ ಪ್ರತಿಭಟಿಸುತ್ತಿದ್ದಾರೆ. ಈ ಬಂಧನಕ್ಕೆಲ್ಲಾ ಯಾರೂ ಹೆದರುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ನಮಗೆ ನ್ಯಾಯ ಬೇಕು. ಈ ದೇಶದ ಯುವಕರು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು
ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ. ನಾವು ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು. ವಿದ್ಯಾರ್ಥಿಗಳು ಎಷ್ಟು ನೋವನ್ನು ಅನುಭವಿಸಿದ್ದಾರೆಂದು ಮಾಧ್ಯಮಗಳು ನೋಡಿವೆ. ಈ ದೇಶದ ಭವಿಷ್ಯ ಅವರಲ್ಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



