ಕಾಕ್ರೋಚ್ 'ಸಂಸತ್ ಚಲೋ': ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್ನಲ್ಲಿ ಜೀವನ್ಮರಣ ಹೋರಾಟ!
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಸೋಮವಾರ "ಸಂಸತ್ ಚಲೋ" ಪ್ರತಿಭಟನಾ ಮೆರವಣಿಗೆ ನಡೆಸಿತು.

ನವದೆಹಲಿ: ನವದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)ದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿಗೆ ರಾಮ್ ಮನೋಹರ್ ಲೋಹಿಯಾ(ಆರ್ಎಂಎಲ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಬೆಂಬಲ ನೀಡಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಸೋಮವಾರ "ಸಂಸತ್ ಚಲೋ" ಪ್ರತಿಭಟನಾ ಮೆರವಣಿಗೆ ನಡೆಸಿತು.
"ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆರ್ಎಂಎಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿದ್ದಾರೆ" ಎಂದು ಮೂಲಗಳು ಹೆಚ್ಚಿನ ವಿವರಗಳನ್ನು ನೀಡದೆ ತಿಳಿಸಿವೆ.
ಸೋಮವಾರ ದೆಹಲಿ ಪೊಲೀಸರು ಒಂದು ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಅಲ್ಲದೆ 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದಿದ್ದರು.
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ದೇಶದ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ತೀವ್ರ ಕಳವಳಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ಸಿಜೆಪಿ ಸಂಸತ್ ಚಲೋ ಮೆರವಣಿಗೆ ಆರಂಭಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



