ದೇಶ

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು

ಈ ಮಧ್ಯೆ ಕೆಲವು ಯುವಕರ ಗುಂಪೊಂದು ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಯೋಧನ ಬೆನ್ನಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು
RAF ಯೋಧನ ಮೇಲೆ ಹಲ್ಲೆ
Published On :

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ "ಸಂಸತ್ ಚಲೋ" ನಡೆಸಿದ ನಂತರ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮುಂದುವರೆಸಿದೆ.

ಈ ಮಧ್ಯೆ ಕೆಲವು ಯುವಕರ ಗುಂಪೊಂದು ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಯೋಧನ ಬೆನ್ನಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ, ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ಸಂಸತ್ ಚಲೋ ಪ್ರತಿಭಟನಾ ಮೆರವಣಿಗೆ ವೇಳೆ ಆರ್‌ಎಎಫ್ ಯೋಧನನ್ನು ಹಲವಾರು ಪ್ರತಿಭಟನಾಕಾರರು ಸುತ್ತುವರೆದು, ಬೆನ್ನಟ್ಟಿ, ಥಳಿಸುತ್ತಿರುವುದು ಸೆರೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಹಲ್ಲೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.