ರಾಜಿನಾಮೆ ಪತ್ರ ಬರೆಯುವುದು ಗೊತ್ತಿಲ್ಲವೇ, RSS ನಿಮಗೆ ಹೇಳಿಕೊಟ್ಟಿಲ್ಲವೇ?: ಮಹುವಾ ಮೊಯಿತ್ರಾ ವ್ಯಂಗ್ಯ
ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷವು ಆಯೋಜಿಸಿರುವ ಪ್ರತಿಭಟನೆಗಳ ನಡುವೆ ಈ ಹೇಳಿಕೆ ಬಂದಿದೆ.

ನವದೆಹಲಿ: ಬಹುಶಃ ಶಿಕ್ಷಣ ಸಚಿವರಿಗೆ ರಾಜಿನಾಮೆ ಪತ್ರ ಬರೆಯುವುದೇ ಗೊತ್ತಿಲ್ಲ, ಆರ್ ಎಸ್ ಎಸ್ ಅವರಿಗೆ ರಾಜಿನಾಮೆ ಪತ್ರ ಬರೆಯುವುದನ್ನು ಕಲಿಸಿಲ್ಲ ಎಂದು TMC ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,ಆರ್ ಎಸ್ ಎಸ್ ನಿಮಗೆ ಕ್ಷಮಾದಾನ ಅರ್ಜಿಗಳನ್ನು ಬರೆಯುವುದನ್ನಷ್ಟೇ ಕಲಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷವು ಆಯೋಜಿಸಿರುವ ಪ್ರತಿಭಟನೆಗಳ ನಡುವೆ ಈ ಹೇಳಿಕೆ ಬಂದಿದೆ.
ಇದೇ ವೇಳೆ ನೀಟ್ ಹಾಗೂ ವಿದ್ಯಾರ್ಥಿಗಳ ಇತರೆ ನೈಜ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಸಂಸತ್ತಿನ ಸದನದಲ್ಲಿ ನೀಟ್ ಸೇರಿದಂತೆ ಯುವಕರ ಎಲ್ಲಾ ನೈಜ ಸಮಸ್ಯೆಗಳ ಕುರಿತು ಚರ್ಚಿಸಲು ನಮ್ಮ ಸರ್ಕಾರ ಶೇ.100ರಷ್ಟು ಸಿದ್ಧವಾಗಿದೆ. ಭಾರತದ ವಿದ್ಯಾರ್ಥಿಗಳನ್ನು ರಾಜಕೀಯ ಅಭಿಯಾನದ ವಸ್ತುವಾಗಿ ಬಳಸಬಾರದು ಎಂದು ಹೇಳಿದರು.

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರಿ ಹೈಡ್ರಾಮ; ಬಲವಂತದಿಂದ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ಸ್ಥಳಾಂತರ! Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


