ಅನಂತ್‌ನಾಗ್: ಉಗ್ರರಿಂದ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಹುತಾತ್ಮ; ಶೋಧ ಕಾರ್ಯಾಚರಣೆ ಆರಂಭ; Video
ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದು, ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಅವರು ಹುತಾತ್ಮರಾಗಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಪಟ್ಟಣದಲ್ಲಿ ಬುಧವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಇಲಾಖೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದು, ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಅವರು ಹುತಾತ್ಮರಾಗಿದ್ದಾರೆ.
ಗುಂಡಿನ ದಾಳಿಯಲ್ಲಿ ಹುಸೇನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಅನಂತನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಅವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ನಂತರ, ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಲಷ್ಕರ್-ಎ-ತೈಬಾದ ಸಹ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್(ಟಿಆರ್‌ಎಫ್) ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
ಈ ವರ್ಷ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಮೇಲೆ ನಡೆದ ಮೊದಲ ಉಗ್ರರ ದಾಳಿ ಇದಾಗಿದೆ.
ಜುಲೈ 8 ರಂದು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೈಬಾ ಉಗ್ರ ಝಾಕಿರ್ ಗನೈ ಹತ್ಯೆಯಾದ ಹದಿನೈದು ದಿನಗಳ ನಂತರ ಈ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



