ದೇಶ

ನೀಟ್ ಸಂಪೂರ್ಣ ರದ್ದುಗೊಳಿಸಿ; ರಾಹುಲ್ ಗಾಂಧಿ 'ಬಂಧನ' ಖಂಡನೀಯ: ತಮಿಳುನಾಡು ಸಿಎಂ ವಿಜಯ್

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಪಕ್ಷದ ಬೆಂಬಲನ್ನು ಘೋಷಿಸಿದ ವಿಜಯ್.

ನೀಟ್ ಸಂಪೂರ್ಣ ರದ್ದುಗೊಳಿಸಿ; ರಾಹುಲ್ ಗಾಂಧಿ 'ಬಂಧನ' ಖಂಡನೀಯ: ತಮಿಳುನಾಡು ಸಿಎಂ ವಿಜಯ್
ತಮಿಳುನಾಡು ಸಿಎಂ ಜೋಸೆಫ್ ವಿಜಯ್
Published On :

ಚೆನ್ನೈ: ಕೇಂದ್ರ ಸರ್ಕಾರ ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಬಗ್ಗೆ ಜನರ ಮತ್ತು ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಬುಧವಾರ ಹೇಳಿದ್ದಾರೆ.

ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಇದರಿಂದ ಮಾತ್ರ ಅಕ್ರಮಗಳಿಗೆ ಬ್ರೇಕ್ ಹಾಕಲು ಸಾಧ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಹೇಳಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಪಕ್ಷದ ಬೆಂಬಲನ್ನು ಘೋಷಿಸಿದ ವಿಜಯ್ ಅವರು, ದೆಹಲಿಯಲ್ಲಿ ನೀಟ್ ಪ್ರತಿಭಟನೆಯ ಸಂದರ್ಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು 'ಪ್ರಜಾಪ್ರಭುತ್ವ ವಿರೋಧಿ' ನಡೆ ಎಂದು ಟೀಕಿಸಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ 'ಬಂಧನ' ಖಂಡನೀಯ ಎಂದು ಹೇಳಿದ್ದಾರೆ.

ನೀಟ್ ರದ್ದುಗೊಳಿಸುವ ವಿಚಾರದಲ್ಲಿ ಟಿವಿಕೆ ರಾಜಿಯಾಗುವುದಿಲ್ಲ ಎಂದು ಪ್ರತಿಪಾದಿಸಿದ ವಿಜಯ್, "ಮತಕ್ಕಾಗಿ" ತಮ್ಮ ಪಕ್ಷವು ಸುಳ್ಳು ಭರವಸೆ ನೀಡುವುದಿಲ್ಲ ಎಂದು ಹೇಳುವ ಮೂಲಕ ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ ಡಿಎಂಕೆಗೆ ತಿರುಗೇಟು ನೀಡಿದ್ದಾರೆ.

ಕಪ್ಪು ಬಟ್ಟೆ ಧರಿಸಿ, ಹಲವಾರು ವಿರೋಧ ಪಕ್ಷಗಳ ನಾಯಕರು ಬುಧವಾರ ನೀಟ್ ಅಕ್ರಮ ಖಂಡಿಸಿ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.