ದೇಶ

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ವಿಸ್ತರಣೆಗೆ ಕೇಂದ್ರ ಅಸ್ತು: 1,264 ಕೋಟಿ ರೂ ವೆಚ್ಚಕ್ಕೆ ಅನುಮೋದನೆ!

ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ವಿಸ್ತರಣೆಗೆ ಕೇಂದ್ರ ಅಸ್ತು: 1,264 ಕೋಟಿ ರೂ ವೆಚ್ಚಕ್ಕೆ ಅನುಮೋದನೆ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ₹‎1,264 ಕೋಟಿ ವೆಚ್ಚದಲ್ಲಿ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಳ್ಳಾರಿ - ಗುಂತಕಲ್‌ ರೈಲ್ವೆ ವಿಭಾಗದ 3ನೇ ಮತ್ತು 4ನೇ ಮಾರ್ಗ (ರೈಲು ಹಳಿ) ನಿರ್ಮಾಣ ಯೋಜನೆಗೆ ಕೇಂದ್ರ ಸರಕಾರ ಸಮ್ಮತಿ ನೀಡಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣದಿಂದ ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದ್ದು, ಸರಕು ಸಾಗಣೆ ಸಾಮರ್ಥ್ಯವೂ ಹೆಚ್ಚಲಿದೆ. ಇದರಿಂದ ಪ್ರಾದೇಶಿಕ ಸಂಪರ್ಕ ಮತ್ತಷ್ಟು ಬಲಗೊಳ್ಳುವ ಜತೆಗೆ ಸ್ಥಳೀಯವಾಗಿ ಆರ್ಥಿಕ ಬೆಳವಣಿಗೆಗೆ ಸಾಕಾರವಾಗಲಿದೆ ಎಂದಿದ್ದಾರೆ.

‎ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿಗೆ ಹೆಚ್ಚು ಹೆಚ್ಚು ರೈಲ್ವೆ ಯೋಜನೆಗಳ ಕೊಡುಗೆ ನೀಡುತ್ತಲೇ ಬಂದಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.