ದೇಶ

'ಏಕಪಕ್ಷೀಯ Mann Ki Baat ಬೇಡ, ಸಂಸತ್‌ನಲ್ಲೇ ಉತ್ತರ ನೀಡಿ': ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ; Video

ಇಂದು ಸಂಸತ್ತಿಗೆ ಬರುವ ಮುನ್ನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ. ಮೊದಲು ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆ ಯಾಚಿಸಿ.

'ಏಕಪಕ್ಷೀಯ Mann Ki Baat ಬೇಡ, ಸಂಸತ್‌ನಲ್ಲೇ ಉತ್ತರ ನೀಡಿ': ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ; Video
ಮಲ್ಲಿಕಾರ್ಜುನ ಖರ್ಗೆ
Published On :

ನವದೆಹಲಿ: ಸಂಸತ್ತಿನ ಹೊರಗೆ ಏಕಪಕ್ಷೀಯವಾಗಿ 'ಮನ್ ಕಿ ಬಾತ್' ಮಾಡುವ ಬದಲು, ಸಂಸತ್ತಿನಲ್ಲೇ ಹೇಳಿಕೆ ನೀಡಿ, ಚರ್ಚೆಗೆ ಉತ್ತರಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಗುರುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಸಂದೇಶದ ಮೂಲಕ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ಪ್ರಸ್ತಾವಿತ ಮಸೂದೆಯನ್ನು ಶುಕ್ರವಾರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಘೋಷಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಮಂತ್ರಿಗಳು ಮೊದಲು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X)ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಅವರು, "ಇಂದು ಸಂಸತ್ತಿಗೆ ಬರುವ ಮುನ್ನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ. ಮೊದಲು ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆ ಯಾಚಿಸಿ. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಲಾಠಿ ಚಾರ್ಜ್ ಮತ್ತು ಪೆಲೆಟ್ ಗನ್ ಬಳಕೆಗೆ ಆದೇಶ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಬಳಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ವಿವರವಾದ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಸಂಸತ್ ಅಧಿವೇಶನ ನಡೆಯುತ್ತಿರುವಾಗ ಪ್ರಧಾನಿ ಸದನದಲ್ಲೇ ಹೇಳಿಕೆ ನೀಡುವುದು ಅವರ ಜವಾಬ್ದಾರಿ. ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಸದನದ ನೆಲೆಯಲ್ಲೇ ಹೇಳಿಕೆ ನೀಡಬೇಕು. ಸಂಸತ್ತಿನ ಹೊರಗೆ ಏಕಪಕ್ಷೀಯ 'ಮನ್ ಕಿ ಬಾತ್' ಮಾಡುವ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣ ವ್ಯವಸ್ಥೆ ಕುರಿತ ರಾಜಕೀಯ ವಾಗ್ವಾದದ ನಡುವೆ ಖರ್ಗೆ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತನ್ನ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.