ದೇಶ

NEET ಪ್ರತಿಭಟನೆ ನಡುವೆ 12 ಗಂಟೆಗಳಲ್ಲಿ Modi Instagram ಫಾಲೋವರ್ಸ್ 11 ಲಕ್ಷ ಏರಿಕೆ, 280 ಮಿಲಿಯನ್ Views!

ಪ್ರಧಾನಿ ನರೇಂದ್ರ ಮೋದಿ ಗುರುವಾರ ತಡರಾತ್ರಿ ದೇಶದ ಯುವಕರನ್ನು ಉದ್ದೇಶಿಸಿ ಮಾತನಾಡಿದ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊದ ಮೂಲಕ ಪ್ರಧಾನಿ ಮೋದಿ ಪತ್ರಿಕೆ ಸೋರಿಕೆ ಸಮಸ್ಯೆಯ ಬಗ್ಗೆ ಅವರೊಂದಿಗೆ ಮಾತನಾಡಿದರು.

NEET ಪ್ರತಿಭಟನೆ ನಡುವೆ 12 ಗಂಟೆಗಳಲ್ಲಿ Modi Instagram ಫಾಲೋವರ್ಸ್ 11 ಲಕ್ಷ ಏರಿಕೆ, 280 ಮಿಲಿಯನ್ Views!
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ತಡರಾತ್ರಿ ದೇಶದ ಯುವಕರನ್ನು ಉದ್ದೇಶಿಸಿ ಮಾತನಾಡಿದ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊದ ಮೂಲಕ ಪ್ರಧಾನಿ ಮೋದಿ ಪತ್ರಿಕೆ ಸೋರಿಕೆ ಸಮಸ್ಯೆಯ ಬಗ್ಗೆ ಅವರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಕೆಲ ಗಂಟೆಗಳಲ್ಲೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿತು. ವೀಡಿಯೊ ಅಪ್‌ಲೋಡ್ ಆಗಿ 24 ಗಂಟೆಗಳು ಕಳೆದಿಲ್ಲ, ಇದು ಈಗಾಗಲೇ ಸುಮಾರು 280 ಮಿಲಿಯನ್ ವೀಕ್ಷಣೆ ಕಂಡಿದೆ. ಇದೇ ವೇಳೆ ಪ್ರಧಾನಿ ಮೋದಿಯವರ ಇನ್‌ಸ್ಟಾಗ್ರಾಮ್ ಖಾತೆಯು 11 ಲಕ್ಷ ಹೆಚ್ಚುವರಿ ಫಾಲೋವರ್‌ಗಳನ್ನು ಗಳಿಸಿದೆ.

ಪ್ರಧಾನಿ ಮೋದಿಯವರ ವೀಡಿಯೊ ವೈರಲ್ ಆಗುತ್ತಿದ್ದಂತೆ, ಅವರ ಇನ್‌ಸ್ಟಾಗ್ರಾಮ್ ಫಾಲೋವರ್‌ಗಳು ಸಹ ಹೆಚ್ಚಾಗಲು ಪ್ರಾರಂಭಿಸಿತ್ತು. 12 ಗಂಟೆಗಳಲ್ಲಿ ಪ್ರಧಾನಿ ಮೋದಿಯವರ ಫಾಲೋವರ್‌ಗಳು 11 ಲಕ್ಷ ಹೆಚ್ಚಾಗಿದೆ. ಮೋದಿ ವೀಡಿಯೊವನ್ನು ಅಪ್‌ಲೋಡ್ ಮಾಡಿದಾಗ, ಅವರ ಇನ್‌ಸ್ಟಾಗ್ರಾಮ್ ಖಾತೆಯು 101 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅದು 102 ಮಿಲಿಯನ್ ಫಾಲೋವರ್‌ಗಳನ್ನು ತಲುಪಿತ್ತು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಇನ್‌ಸ್ಟಾಗ್ರಾಮ್ ರೀಲ್‌ಗಳು ಮತ್ತು ಸಂವಾದಾತ್ಮಕ ಮಾತುಗಳ ಮೂಲಕ ಯುವಜನರೊಂದಿಗೆ ಸಂಪರ್ಕ ಸಾಧಿಸುವಂತೆ ಸಲಹೆ ನೀಡಿದರು.

ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಇದ್ದಾರೆ. ಇದು ನಾವೆಲ್ಲರೂ ಸಂಪರ್ಕ ಸಾಧಿಸಬೇಕಾದ ನಾಗರಿಕರ ಸಂಭಾವ್ಯ ವಿಭಾಗವಾಗಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಗುರುವಾರ ರಾತ್ರಿ ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ನಿಭಾಯಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿರುವುದಾಗಿ ಘೋಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.