CJP Protest: ಜಂತರ್ ಮಂತರ್ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಬೇಡಿ- JNU ವಿದ್ಯಾರ್ಥಿಗಳಿಗೆ ತಾಕೀತು!
ತಮ್ಮ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡುವಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಜವಾಬ್ದಾರಿಯಿಂದ ವರ್ತಿಸುವಂತೆ ತಿಳಿಸಲಾಗಿದೆ.

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಜಂತರ್ ಮಂತರ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಿಂದ ದೂರವಿರುವಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU) ಶುಕ್ರವಾರ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗೆ ಸಲಹೆ ನೀಡಿದೆ.
ತಮ್ಮ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡುವಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಜವಾಬ್ದಾರಿಯಿಂದ ವರ್ತಿಸುವಂತೆ ತಿಳಿಸಲಾಗಿದೆ.
ಈ ಸಂಬಂಧ ವಿಶ್ವವಿದ್ಯಾನಿಲಯದ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, , ಜೆಎನ್ ವಿಶ್ವವಿದ್ಯಾಲಯದ ಎಲ್ಲಾ ಪಾಲುದಾರರು ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಸಾರ್ವಜನಿಕ ಪ್ರತಿಭಟನೆಗಳ ಕುರಿತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಜಂತರ್ ಮಂತರ್ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ವಿಶ್ವವಿದ್ಯಾಲಯ ಹೇಳಿದೆ.
"ಜೆಎನ್‌ಯುನ ಎಲ್ಲಾ ಪಾಲುದಾರರು ಜವಾಬ್ದಾರಿಯುತವಾಗಿ ವರ್ತಿಸುವಂತೆ ಮತ್ತು ಅವರ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ. ಸಾರ್ವಜನಿಕ ಪ್ರತಿಭಟನೆ ಕುರಿತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳಿಗೆ ಅನುಸಾರವಾಗಿ, ನವದೆಹಲಿಯ ಜಂತರ್ ಮಂತರ್ ಅಥವಾ ಸುತ್ತಮುತ್ತಲಿನ ಸಭೆಗಳಲ್ಲಿ ಭಾಗವಹಿಸುವುದನ್ನು ಅಥವಾ ಭೇಟಿ ನೀಡುವುದನ್ನು ತಡೆಯಲು ಮನವಿ ಮಾಡಲಾಗಿದೆ.
ಸಾಮಾಜಿಕ ಮಾಧ್ಯಮವನ್ನು ಬಳಸುವಾಗ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ವಿಶ್ವವಿದ್ಯಾನಿಲಯವು ಎಚ್ಚರಿಸಿದೆ. ಒಂದು ವೇಳೆ ನಿಯಮ ಉಲ್ಲಂಘನೆಯಾದ್ರೆ ಕಾನೂನು ಪರಿಣಾಮಗಳನ್ನು ಮತ್ತು ವಿಶ್ವವಿದ್ಯಾನಿಲಯದ ನೀತಿ ಸಂಹಿತೆಯ ಅಡಿಯಲ್ಲಿ ಶಿಸ್ತು ಕ್ರಮವನ್ನು ಎದುರಿಸಬಹುದು ಎಂದು ಎಚ್ಚರಿಸಿದೆ. ಶೈಕ್ಷಣಿಕ ಜವಾಬ್ದಾರಿ ಮತ್ತು ಜವಾಬ್ದಾರಿಯುತ ಪೌರತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



