ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.
"ಭಾರತದ ಸಂವಿಧಾನದ 75ನೇ ವಿಧಿಯಡಿ ಪ್ರಧಾನ ಮಂತ್ರಿಯವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗನಾದ ಬಿಟ್ಟು 2024 ರಲ್ಲಿ ಬಿಜೆಪಿ ಸೇರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ವಿಫಲರಾದರು. ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.
ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ರವನೀತ್ ಸಿಂಗ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಆಮ್ ಆದ್ಮಿ ಪಕ್ಷ (ಎಎಪಿ) ಹಿಡಿತದಲ್ಲಿರುವ ಗಡಿ ರಾಜ್ಯದಲ್ಲಿ ಮುಂದಿನ ವರ್ಷ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಅಡಿಪಾಯ ಹಾಕುವಲ್ಲಿ ಅವರು ನಿಕಟವಾಗಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



