CJP ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಇಲ್ಲ, ಸರ್ಕಾರದಿಂದ ಭರವಸೆ- ಜೆ.ಪಿ ನಡ್ಡಾ
ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ನಿಯೋಗಕ್ಕೆ ಭರವಸೆ ನೀಡಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಮತ್ತು 'ಕಾಕ್ರೋಚ್ ಜನತಾ ಪಾರ್ಟಿ' (CJP) ನಿಯೋಗದ ನಡುವೆ ನಡೆದ ಮೂರನೇ ಸುತ್ತಿನ ಮಾತುಕತೆಯಲ್ಲಿ ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ ಶನಿವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದು, ಮಾತುಕತೆ ವೇಳೆ CJP ನಿಯೋಗವು ಪರೀಕ್ಷೆ ಸುಧಾರಣೆಗೆ ಸಂಬಂಧಿಸಿದಂತೆ 'ಐದು ಅಂಶಗಳ ಲಿಖಿತ ಪ್ರಸ್ತಾವನೆ ಸಲ್ಲಿಸಿತು. ಮಾತುಕತೆ ವೇಳೆ ಪ್ರತಿಭಟನೆಯಿಂದ ಉಂಟಾದ ವಿಷಯಗಳ ಮೇಲೆ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ.
ಆಯೋಜಕರು-ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಇಲ್ಲ- ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ನಿಯೋಗಕ್ಕೆ ಭರವಸೆ ನೀಡಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.
ಆಯೋಜಕರು ಮತ್ತು ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಹಾಗೂ ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.
ಕೇಂದ್ರದಿಂದ ಸಂತಾಪ, ಪರಿಹಾರದ ಭರವಸೆ: ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸರ್ಕಾರವು ತನ್ನ ಸಂತಾಪವನ್ನು ವ್ಯಕ್ತಪಡಿಸಿದ್ದು, ನಿಯಮಗಳ ಪ್ರಕಾರ ಪರಿಹಾರ ನೀಡುವುದಾಗಿ ಭರವಸೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷೆ ಸುಧಾರಣೆ ಪ್ರಸ್ತಾವನೆಗೆ ಸಕಾರಾತ್ಮಕ ಪ್ರತಿಕ್ರಿಯೆ; ಮಾತುಕತೆ ಮುಂದುವರಿಕೆ: ಪರೀಕ್ಷೆ ಮತ್ತು ಶಿಕ್ಷಣ ಸುಧಾರಣೆಗಳಿಗೆ ಸಂಬಂಧಿಸಿದ ಸಿಜೆಪಿ (CJP)ಯ ಐದು ಅಂಶಗಳ ಪ್ರಸ್ತಾವನೆಗೆ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ ಮತ್ತು ಈ ಕುರಿತ ಮಾತುಕತೆಗಳು ಮುಂದುವರಿಯಲಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



