A proud moment for every Indian: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಪ್ರಧಾನಿ ಮೋದಿಯ ಮೊದಲ ಪೋಸ್ಟ್!
ಯುನೆಸ್ಕೋ ಮಾನ್ಯತೆಯು ಭಾರತದ ಆಳವಾದ ನಾಗರಿಕ ಮತ್ತು ಆಧ್ಯಾತ್ಮಿಕ ಪರಂಪರೆ"ಯನ್ನು ಎತ್ತಿಹಿಡಿಯುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿ: NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಸುಮಾರು ಎರಡು ಗಂಟೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು 'ಎಕ್ಸ್' (X) ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದಾರೆ.
ಸಚಿವರ ರಾಜೀನಾಮೆ ನಂತರ ಪ್ರಧಾನಿ ಮೋದಿ, ತಮ್ಮ ಮೊದಲ ಸಾರ್ವಜನಿಕ ಸಂದೇಶದಲ್ಲಿ ಉತ್ತರ ಪ್ರದೇಶದ ವಾರಣಾಸಿ ಬಳಿಯಿರುವ ಪ್ರಾಚೀನ ಬೌದ್ಧ ತಾಣ ಸಾರನಾಥ ಅಧಿಕೃತವಾಗಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದಕ್ಕೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ಸಾರನಾಥವು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದಕ್ಕೆ ಅತೀವ ಸಂತೋಷ"ವಾಗಿದೆ. ಇದು "ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣವಾಗಿದೆ. ಸಾರನಾಥವು ಭಗವಾನ್ ಬುದ್ಧನೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ. ಅವರ ಜ್ಞಾನ, ಸಹಾನುಭೂತಿ ಮತ್ತು ಸಾಮರಸ್ಯದ ಶಾಶ್ವತ ಸಂದೇಶವು ಜಗತ್ತಿಗೆ ಸ್ಫೂರ್ತಿಯಾಗಿದೆ" ಎಂದು ಪ್ರಧಾನಿ ಮೋದಿ 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.
ಯುನೆಸ್ಕೋ ಮಾನ್ಯತೆಯು ಭಾರತದ ಆಳವಾದ ನಾಗರಿಕ ಮತ್ತು ಆಧ್ಯಾತ್ಮಿಕ ಪರಂಪರೆ"ಯನ್ನು ಎತ್ತಿಹಿಡಿಯುತ್ತದೆ. ಅಲ್ಲದೆ, ಇದು ಪ್ರಪಂಚದಾದ್ಯಂತದ ಹೆಚ್ಚಿನ ಜನರನ್ನು ಸಾರನಾಥಕ್ಕೆ ಭೇಟಿ ನೀಡಲು ಮತ್ತು ಭಗವಾನ್ ಬುದ್ಧನ ಬೋಧನೆಗಳೊಂದಿಗೆ ಸಂಪರ್ಕ ಸಾಧಿಸಲು ಪ್ರೋತ್ಸಾಹಿಸುತ್ತದೆ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಯುನೆಸ್ಕೋ ನೀಡಿದ ಅಧಿಕೃತ ಘೋಷಣೆಯನ್ನೂ ಪ್ರಧಾನಿ ಮರು-ಪೋಸ್ಟ್ (repost) ಮಾಡಿದ್ದಾರೆ.
ಗಮನಾರ್ಹವೆಂದರೆ, ಶಿಕ್ಷಣ ಸಚಿವರು ರಾಜೀನಾಮೆ ನೀಡಿದ ನಂತರ ಸಂಜೆ 6.15 ರವರೆಗೂ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಕುರಿತು ಪ್ರಧಾನಿ ಮೋದಿ ಯಾವುದೇ ಸಾರ್ವಜನಿಕ ಹೇಳಿಕೆಯನ್ನು ನೀಡಿರಲಿಲ್ಲ; ಬದಲಾಗಿ ಯುನೆಸ್ಕೋಗೆ ಸಂಬಂಧಿಸಿದ ಪೋಸ್ಟ್ ಅವರ ಮೊದಲ ಅಪ್‌ಡೇಟ್ ಆಗಿತ್ತು. ಆದಾಗ್ಯೂ, ರಾಜೀನಾಮೆಗೆ ಮುಂಚಿನ ದಿನಗಳಲ್ಲಿ, NEET ವಿವಾದದ ಕುರಿತು ದೇಶಾದ್ಯಂತ ನಡೆಯುತ್ತಿದ್ದ ಪ್ರತಿಭಟನೆಗಳ ಬಗ್ಗೆ ಪ್ರಧಾನಿ ಪದೇ ಪದೇ ಮಾತನಾಡಿದ್ದರು.
ಜುಲೈ 24 ರಂದು ಪ್ರತಿಭಟನೆಯ ಬೆಂಬಲವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರಿಗೆ, ತಮ್ಮ ಉಪವಾಸವನ್ನು ಕೊನೆಗೊಳಿಸಿದ ನಂತರ ವೈದ್ಯಕೀಯ ಸಲಹೆಯನ್ನು ಪಾಲಿಸುವಂತೆ ಅವರು ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



