ದೇಶ

AAPಗೆ ಮುಖಭಂಗ: ಕ್ರೆಡಿಟ್ ತೆಗೆದುಕೊಳ್ಳಲು ಜಂತರ್ ಮಂತರ್‌ಗೆ ತೆರಳಿದ್ದ ಸಿಸೋಡಿಯಾ ಬೆರಳಿಸಿದ ವಿದ್ಯಾರ್ಥಿಗಳು, Video

ಪಂಜಾಬ್ ನಲ್ಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಈ ಬಗ್ಗೆ ನೀವು ಉತ್ತರ ನೀಡಿ ಎಂದು ಪ್ರಶ್ನೆ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

AAPಗೆ ಮುಖಭಂಗ: ಕ್ರೆಡಿಟ್ ತೆಗೆದುಕೊಳ್ಳಲು ಜಂತರ್ ಮಂತರ್‌ಗೆ ತೆರಳಿದ್ದ ಸಿಸೋಡಿಯಾ ಬೆರಳಿಸಿದ ವಿದ್ಯಾರ್ಥಿಗಳು, Video
ಮನೀಶ್ ಸಿಸೋಡಿಯಾ
Published On :

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಗೆ ಮಣಿದ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದಕ್ಕೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ದೆಹಲಿಯ ಜಂತರ್ ಮಂತರ್ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದರು. ಇನ್ನು ಪ್ರಧಾನ್ ರಾಜಿನಾಮೆಯ ಕ್ರೆಡಿಟ್ ತೆಗೆದುಕೊಳ್ಳಲು AAP ನಾಯಕ, ಮಾಜಿ ಸಚಿವ ಮನೀಶ್ ಸಿಸೋಡಿಯಾ ಜಂತರ್ ಮಂತರ್ ಗೆ ತೆರಳಿದ್ದರು. ಈ ವೇಳೆ ಅವರನ್ನು ಸುತ್ತುವರಿದ ವಿದ್ಯಾರ್ಥಿಗಳು ಪಂಜಾಬ್ ನಲ್ಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಈ ಬಗ್ಗೆ ನೀವು ಉತ್ತರ ನೀಡಿ ಎಂದು ಪ್ರಶ್ನೆ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಈಗ ಅವರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಎಂದು ಘೋಷಿಸಿದೆ. ಇಂದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇನ್ನು ಉಳಿದ ಬೇಡಿಕೆಗಳನ್ನು ಮಂಗಳವಾರದೊಳಗೆ ಈಡೇರಿಸಲಾಗುವುದು ಎಂದು ಸರ್ಕಾರ ಈಗ ಭರವಸೆ ನೀಡಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.