'10 ದಿನಗಳ ಬೆಳವಣಿಗೆ ಅತ್ಯಂತ ದುಃಖ ತಂದಿದೆ, ದೇಶವಿರೋಧಿ ಶಕ್ತಿಗಳು ಪರಿಸ್ಥಿತಿ ದುರುಪಯೋಗ ಪಡಿಸಿಕೊಳ್ಳಬಾರದು'
ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

ನವದೆಹಲಿ: ದೇಶದಲ್ಲಿನ ಕಳೆದ 10 ದಿನಗಳ ಬೆಳವಣಿಗೆಗಳು ತಮ್ಮನ್ನು ಅತ್ಯಂತ ದುಃಖಿತಗೊಳಿಸಿದ್ದು, ದೇಶವಿರೋಧಿ ಶಕ್ತಿಗಳು ಪರಿಸ್ಥಿತಿ ದುರುಪಯೋಗಪಡಿಸಿಕೊಳ್ಳಬಾರದು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ನೀಟ್-ಯುಜಿ 2026 ಪರೀಕ್ಷೆ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಇದು ತಮ್ಮ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ, ಭಾರತದ ಯುವಶಕ್ತಿಯ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಪ್ರಧಾನ್ ತಿಳಿಸಿದ್ದು, ಅಲ್ಲದೆ ಯುವಜನತೆ ಶಿಕ್ಷಣ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕು ಕರೆ ನೀಡಿದ್ದಾರೆ.
ದೇಶವಿರೋಧಿ ಶಕ್ತಿಗಳು ಪರಿಸ್ಥಿತಿ ದುರುಪಯೋಗ ಪಡಿಸಿಕೊಳ್ಳಬಾರದು
ದೆಹಲಿ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿರುವ ಅವರು, ಭಾರತದ ಯುವಜನತೆ ಶಿಕ್ಷಣ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕು. ದೇಶವಿರೋಧಿ ಶಕ್ತಿಗಳು ಈ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಳ್ಳಬಾರದು.
ದೇಶದ ಏಕತೆ ಕಾಪಾಡಲ್ಪಡಬೇಕು ಹಾಗೂ ಒಬ್ಬ ವಿದ್ಯಾರ್ಥಿಯ ಭವಿಷ್ಯವೂ ಕಾನೂನು ಹೋರಾಟಗಳಲ್ಲಿ ಸಿಲುಕಬಾರದು ಎಂಬ ಉದ್ದೇಶದಿಂದ ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಾಷ್ಟ್ರಸೇವೆಯೇ ತಮ್ಮ ಜೀವನದ ಅತ್ಯುನ್ನತ ಆದ್ಯತೆಯಾಗಿದ್ದು, ಮುಂದೆಯೂ ಭಾರತ ಮಾತೆ, ಒಡಿಶಾದ ಜನತೆ ಹಾಗೂ ದೇಶದ ಯುವಜನರ ಆಶಯಗಳನ್ನು ಈಡೇರಿಸಲು ಎಲ್ಲ ರೀತಿಯಲ್ಲೂ ಸೇವೆ ಸಲ್ಲಿಸುವುದಾಗಿ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



