ದೇಶ

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!

ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ.

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!
ಕಪಿಲ್‌ ಸಿಬಲ್ - ಸೌರವ್ ದಾಸ್
Published On :

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ ಸಿಜೆಪಿಗೆ ಕಾನೂನು ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ ಎಂದು ಕಬಿಲ್ ಸಿಬಲ್ ಅವರು ತಿಳಿಸಿದ್ದಾರೆ.

ಇಂದು ಸಿಜೆಪಿ ವಕ್ತಾರ ಸೌರವ್ ದಾಸ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಪಿಲ್ ಸಿಬಲ್ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದನ್ನು ತಡೆಯಲು ಮತ್ತು ಅವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿ ಹೇಳಿದ್ದಾರೆ.

ಪ್ರತಿಭಟನಾಕಾರರ ಮೇಲೆ ಎಲ್ಲಿ, ಏನು ಕ್ರಮ ಜರುಗಿಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಸಿಜೆಪಿ ಒಂದು ಬಲವಾದ ಚೌಕಟ್ಟನ್ನು ರೂಪಿಸಲಿದೆ. ಉಚಿತವಾಗಿ ಕಾನೂನು ನೆರವು ನೀಡಲು ಬಯಸುವ ವಕೀಲರು ತಮ್ಮ ಹೆಸರು, ಸ್ಥಳ ಹಾಗೂ ಸಹಾಯದ ವಿವರಗಳನ್ನು ನೋಂದಾಯಿಸಿಕೊಳ್ಳಲು ಪ್ರತ್ಯೇಕ ವೆಬ್‌ಸೈಟ್ ತೆರೆಯಲಾಗುವುದು ಎಂದು ತಿಳಿಸಿದರು.

ಎಲ್ಲೆಲ್ಲಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತದೆಯೋ, ಅಲ್ಲೆಲ್ಲಾ ನಾವು ಅವರ ಪರವಾಗಿ ನಿಲ್ಲುತ್ತೇವೆ. ದೇಶಾದ್ಯಂತ ನಮ್ಮ ವಕೀಲರು ಅವರಿಗೆ ಬೆಂಬಲ ನೀಡಲಿದ್ದಾರೆ. ನಾನು ಈ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದು, ದೇಶದ ಇತರ ವಕೀಲರು ಹಾಗೂ ಸಾರ್ವಜನಿಕರು ಸಹ ದೇಣಿಗೆ ನೀಡಬೇಕಾಗಿ ವಿನಂತಿಸುತ್ತೇನೆ ಎಂದು ಕಪಿಲ್ ಸಿಬಲ್ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.