ನಕಲಿ ದಾಖಲೆ ಬಳಸಿ ಪಾಸ್ ಪೋರ್ಟ್ ಪಡೆದ ಪ್ರಕರಣ: ಛೋಟಾ ರಾಜನ್‌ಗೆ 7 ವರ್ಷ ಜೈಲು ಶಿಕ್ಷೆ!
ಶಿಕ್ಷೆಗೆ ಗುರಿಯಾಗಿರುವ ಛೋಟಾ ರಾಜನ್ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಅಲ್ಲಿ ಈಗಾಗಲೇ ಜೀವಾವಧಿ ಕಠಿಣ ಕಾರಾಗೃಹವಾಸವನ್ನು ಅನುಭವಿಸುತ್ತಿದ್ದಾನೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಸ್‌ಪೋರ್ಟ್ ಪಡೆದಿದ್ದಕ್ಕಾಗಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಡಿತರ ಚೀಟಿಯಂತಹ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಎಂಬ ನಕಲಿ ಗುರುತನ್ನು ಸೃಷ್ಟಿಸಿಕೊಂಡಿದ್ದ ರಾಜನ್ ವಿರುದ್ಧದ 22 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಆತನಿಗೆ ಶಿಕ್ಷೆ ವಿಧಿಸುವಲ್ಲಿ ತನಿಖಾ ಸಂಸ್ಥೆ ಸಿಬಿಐ ಯಶಸ್ವಿಯಾಗಿದೆ.
ಶಿಕ್ಷೆಗೆ ಗುರಿಯಾಗಿರುವ ಛೋಟಾ ರಾಜನ್ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಅಲ್ಲಿ ಈಗಾಗಲೇ ಜೀವಾವಧಿ ಕಠಿಣ ಕಾರಾಗೃಹವಾಸವನ್ನು ಅನುಭವಿಸುತ್ತಿದ್ದಾನೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Chhota Rajan: ಗ್ಯಾಂಗ್ ಸ್ಟರ್ ಗೆ ಬಿಗ್ ರಿಲೀಫ್; ಜೀವಾವಧಿ ಶಿಕ್ಷೆ ಅಮಾನತು ಮಾಡಿದ ಹೈಕೋರ್ಟ್, ಜಾಮೀನು ಮಂಜೂರು!
ಆರೋಪಿಯು ನಕಲಿ ದಾಖಲೆಗಳನ್ನು ಸಲ್ಲಿಸಿ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿ ಪಡೆದುಕೊಂಡಿದ್ದಾನೆ. ಆ ಮೂಲಕ ಚೆನ್ನೈನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ವಂಚಿಸಿರುವ ಆರೋಪದ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ತನಿಖಾ ಸಂಸ್ಥೆಯು 2002ರ ಮಾರ್ಚ್ 19ರಂದು ತನಿಖೆಯನ್ನು ಪ್ರಾರಂಭಿಸಿತ್ತು.
"ಆರೋಪಿ ಛೋಟಾ ರಾಜನ್ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಹೆಸರಿನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ. ಅಲ್ಲದೆ, ವಿಜಯ ಕದಮ್‌ನ ನಿಜವಾದ ಹೆಸರು ರಾಜೇಂದ್ರ (ಅಲಿಯಾಸ್ ನಾನಾ ಅಲಿಯಾಸ್ ಛೋಟಾ ರಾಜನ್) ಆಗಿದ್ದು, ಆತ ಮುಂಬೈ ನಿವಾಸಿ ಸದಾಶಿವ ಅವರ ಪುತ್ರ ಎಂಬುದು ಕೂಡ ಪತ್ತೆಯಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


