SDRF ಜವಾನನ ಸಮಯಪ್ರಜ್ಞೆ; ಗಂಗೆಯ ಪ್ರವಾಹದಲ್ಲಿ ಸಿಲುಕಿದ್ದ ಶಿವಭಕ್ತನ ಜೀವ ರಕ್ಷಣೆ, Video Viral
ಯುವಕ ಗಂಗೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ನೀರಿನ ವೇಗದ ಸೆಳೆತಕ್ಕೆ ಸಿಲುಕಿದ್ದಾನೆ. ಈ ವೇಳೆ ಆತ ಸಹಾಯಕ್ಕಾಗಿ ಕೂಗಾಡುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆತಂಕಗೊಂಡು ರಕ್ಷಣೆಗೆ ಮೊರೆಯಿಟ್ಟರು.

ಹರಿದ್ವಾರ: ಉತ್ತರಾಖಂಡದ ಹರಿದ್ವಾರದ ಕಾಂಗ್ರಾ ಘಾಟ್‌ನಲ್ಲಿ ಗಂಗಾಸ್ನಾನಕ್ಕೆ ಇಳಿದಿದ್ದ ಶಿವಭಕ್ತನೊಬ್ಬ ಗಂಗಾ ನದಿಯ ಪ್ರಬಲ ಪ್ರವಾಹದಲ್ಲಿ ಸಿಲುಕಿಕೊಂಡು ಕೊಚ್ಚಿಹೋಗುತ್ತಿದ್ದ ಸಂದರ್ಭದಲ್ಲಿ SDRF ಜವಾನರೊಬ್ಬರು ಜೀವದ ಹಂಗುತೊರೆದು ರಕ್ಷಣೆ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ಈ ದಿಢೀರ್ ಘಟನೆಯಿಂದಾಗಿ ಕೆಲ ಕ್ಷಣಗಳ ಕಾಲ ಘಾಟ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಿದ್ದ ಭಕ್ತರು ಭಯಭೀತರಾಗಿದ್ದರು.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಯುವಕ ಗಂಗೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ನೀರಿನ ವೇಗದ ಸೆಳೆತಕ್ಕೆ ಸಿಲುಕಿದ್ದಾನೆ. ಈ ವೇಳೆ ಆತ ಸಹಾಯಕ್ಕಾಗಿ ಕೂಗಾಡುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆತಂಕಗೊಂಡು ರಕ್ಷಣೆಗೆ ಮೊರೆಯಿಟ್ಟರು.
ಅದೇ ಸಮಯದಲ್ಲಿ ಕರ್ತವ್ಯದಲ್ಲಿದ್ದ ರಾಜ್ಯ ವಿಪತ್ತು ನಿರ್ವಹಣಾ ದಳ (SDRF)ದ ಜವಾನ ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಯಾವುದೇ ವಿಳಂಬ ಮಾಡದೆ ಗಂಗಾ ನದಿಗೆ ಧುಮುಕಿದರು. ಪ್ರಬಲ ಪ್ರವಾಹವನ್ನು ಲೆಕ್ಕಿಸದೆ ಯುವಕನತ್ತ ಈಜಿ ತಲುಪಿದ ಅವರು ಸಾಕಷ್ಟು ಸಮಯದ ಹೋರಾಟದ ಬಳಿಕ ಯುವಕನನ್ನು ಸುರಕ್ಷಿತವಾಗಿ ದಡಕ್ಕೆ ಕರೆತರುವಲ್ಲಿ ಯಶಸ್ವಿಯಾದರು.
ಯುವಕ ಬಚಾವ್
ಯುವಕನನ್ನು ರಕ್ಷಿಸಿದ ಬಳಿಕ ಸ್ಥಳದಲ್ಲಿದ್ದವರು ನಿಟ್ಟುಸಿರು ಬಿಟ್ಟಿದ್ದು, ಜವಾನನ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ಶ್ಲಾಘಿಸಿದರು. ತಕ್ಷಣವೇ ಯುವಕನ ಆರೋಗ್ಯವನ್ನು ಪರಿಶೀಲಿಸಲಾಗಿದ್ದು, ಆತ ಸುರಕ್ಷಿತವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಗಂಗೆಯಲ್ಲಿ ಸ್ನಾನ ಮಾಡುವ ವೇಳೆ ಭಕ್ತರು ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ. ಮಳೆಗಾಲದಲ್ಲಿ ಗಂಗೆಯ ನೀರಿನ ಹರಿವು ಹೆಚ್ಚಿರುವ ಕಾರಣ, ನಿಗದಿತ ಸುರಕ್ಷಿತ ಪ್ರದೇಶಗಳಲ್ಲಿಯೇ ಸ್ನಾನ ಮಾಡುವಂತೆ ಆಡಳಿತ ಈಗಾಗಲೇ ಸಾರ್ವಜನಿಕರಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



