PM ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; Meta India ಮುಖ್ಯಸ್ಥ ಸೇರಿ ಹಲವರ ವಿರುದ್ಧ ಕೇಸು ದಾಖಲು
ಜುಲೈ 29ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಮಾಜಿಕ ಜಾಲತಾಣ ವೀಕ್ಷಿಸುತ್ತಿದ್ದಾಗ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಎಂದು ತೋರುವ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟುಮಾಡುವ ರೀತಿಯ ರೀಲ್ಸ್ ಮತ್ತು ಪೋಸ್ಟ್‌ಗಳನ್ನು ಗಮನಿಸಿದ್ದಾಗಿ ತಿಳಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾರ್ಫ್ ಮಾಡಿದ ಹಾಗೂ ಆಕ್ಷೇಪಾರ್ಹ ವಿಷಯಗಳನ್ನು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಆರೋಪದ ಮೇಲೆ, ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಹಲವು ಸಾಮಾಜಿಕ ಜಾಲತಾಣ ಖಾತೆಗಳ ನಿರ್ವಾಹಕರು ಹಾಗೂ ಮೆಟಾ ಇಂಡಿಯಾದ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎಫ್‌ಐಆರ್ ಪ್ರಕಾರ, ಜುಲೈ 29ರಂದು ಸಂಜೆ 7.40ಕ್ಕೆ ಬಿಜೆಪಿ ತೆಲಂಗಾಣದ ಸಾಮಾಜಿಕ ಜಾಲತಾಣ ಕೋರ್ ಸಮಿತಿಯ ಸದಸ್ಯ ಟಿ. ಸಾಯಿಕಿರಣ್ ಗೌಡ್ (32ವ) ಅವರು ದೂರು ಸಲ್ಲಿಸಿದ್ದರು. ಅವರು ಹೈದರಾಬಾದ್‌ನ ನಾಂಪಳ್ಳಿಯ ಡಾ. ಎಸ್.ಪಿ. ಮುಖರ್ಜಿ ಭವನ ನಿವಾಸಿಯಾಗಿದ್ದಾರೆ.
ದೂರಿನಲ್ಲಿ, ಜುಲೈ 29ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಮಾಜಿಕ ಜಾಲತಾಣ ವೀಕ್ಷಿಸುತ್ತಿದ್ದಾಗ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಎಂದು ತೋರುವ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟುಮಾಡುವ ರೀತಿಯ ರೀಲ್ಸ್ ಮತ್ತು ಪೋಸ್ಟ್‌ಗಳನ್ನು ಗಮನಿಸಿದ್ದಾಗಿ ತಿಳಿಸಿದ್ದಾರೆ.
ದೂರುದಾರರು ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ನ 20 ರೀಲ್ಸ್ ಮತ್ತು ಪೋಸ್ಟ್‌ಗಳ ಯುಆರ್‌ಎಲ್‌ಗಳನ್ನು ಪೊಲೀಸರಿಗೆ ಸಲ್ಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಂರಕ್ಷಿಸುವುದು, ಸಂಬಂಧಿತ ಖಾತೆಗಳ ನಿರ್ವಾಹಕರನ್ನು ಪತ್ತೆಹಚ್ಚುವುದು, ಮೆಟಾ ಸಂಸ್ಥೆಯಿಂದ ಖಾತೆಗಳ ವಿವರಗಳನ್ನು ಪಡೆಯುವುದು ಹಾಗೂ ಸಂಪೂರ್ಣ ತನಿಖೆ ನಡೆಸುವಂತೆ ಕೋರಿದ್ದಾರೆ.
ಮಾರ್ಫ್ ಮಾಡಿದ ಇಂತಹ ರೀಲ್ಸ್‌ಗಳನ್ನು ತನ್ನ ವೇದಿಕೆಯಲ್ಲಿ ಪ್ರಸಾರವಾಗಲು ಅವಕಾಶ ನೀಡಿದ ಆರೋಪದ ಮೇಲೆ ಮೆಟಾ ಸಂಸ್ಥೆಯ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಾನೂನು ಕ್ರಮ
ದೂರಿನ ಆಧಾರದ ಮೇಲೆ, ಹೈದರಾಬಾದ್ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಎಎಸ್‌ಐ ಕೆ. ಹರಿ ರಾಮ್ ಅವರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(C) ಮತ್ತು 67, ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 353(2) ಮತ್ತು 336(4) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಮುಂದಿನ ತನಿಖೆಯನ್ನು ಇನ್ಸ್‌ಪೆಕ್ಟರ್ ಪಿ. ಜಯಶಂಕರ್ ಅವರಿಗೆ ವಹಿಸಲಾಗಿದೆ.

ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ: ಪ್ರಧಾನಿ ಮೋದಿ ಸೆಲ್ಫೀ ವೀಡಿಯೋ ಕುರಿತು CJP ವ್ಯಂಗ್ಯ..!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


