ದೇಶ

ಬಿಜೆಪಿಯಲ್ಲಿ ಮೂಲೆ ಗುಂಪು: ಹೊಸ ಪಕ್ಷ ಆರಂಭಿಸಲು ಅಣ್ಣಾಮಲೈ ಸಜ್ಜು; BJP ತೊರೆಯುತ್ತಾರಾ ಮಾಜಿ IPS? Video

ಸಮಾನ ಮನಸ್ಕರನ್ನು ಒಗ್ಗೂಡಿಸಿ, ಬಲಿಷ್ಠ ಸ್ವಯಂಸೇವಕರ ಪಡೆಯನ್ನು ಕಟ್ಟುವ ಉದ್ದೇಶವನ್ನು ಅವರು ಹೊಂದಿದ್ದಾರೆ ಎನ್ನಲಾಗಿದೆ. ಈ ನೂತನ ಸಂಘಟನೆಗೆ 'ಮಕ್ಕಳ್ ಶಕ್ತಿ ಇಯಕ್ಕಂ' (ಜನಶಕ್ತಿ ಚಳವಳಿ) ಎಂದು ಹೆಸರಿಡಲು ತೀರ್ಮಾನಿಸಲಾಗಿದೆ

ಬಿಜೆಪಿಯಲ್ಲಿ ಮೂಲೆ ಗುಂಪು: ಹೊಸ ಪಕ್ಷ ಆರಂಭಿಸಲು ಅಣ್ಣಾಮಲೈ ಸಜ್ಜು; BJP ತೊರೆಯುತ್ತಾರಾ ಮಾಜಿ IPS? Video
ಅಣ್ಣಾಮಲೈ
Published On :

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗುವ ಮುನ್ಸೂಚನೆ ದೊರೆತಿದೆ. ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೊಸ ರಾಜಕೀಯ ಪಕ್ಷ ಆರಂಭಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಮಾನ ಮನಸ್ಕರನ್ನು ಒಗ್ಗೂಡಿಸಿ, ಬಲಿಷ್ಠ ಸ್ವಯಂಸೇವಕರ ಪಡೆಯನ್ನು ಕಟ್ಟುವ ಉದ್ದೇಶವನ್ನು ಅವರು ಹೊಂದಿದ್ದಾರೆ ಎನ್ನಲಾಗಿದೆ. ಈ ನೂತನ ಸಂಘಟನೆಗೆ 'ಮಕ್ಕಳ್ ಶಕ್ತಿ ಇಯಕ್ಕಂ' (ಜನಶಕ್ತಿ ಚಳವಳಿ) ಎಂದು ಹೆಸರಿಡಲು ತೀರ್ಮಾನಿಸಲಾಗಿದೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಿದಾಡುತ್ತಿವೆ.

ಸಿಬಿಎಸ್‌ಇ (CBSE) 9ನೇ ತರಗತಿ ವಿದ್ಯಾರ್ಥಿಗಳಿಗೆ ಜಾರಿಗೊಳಿಸಿರುವ ತ್ರಿಭಾಷಾ ನೀತಿಯ ವಿಚಾರದಲ್ಲಿ ಅಣ್ಣಾಮಲೈ ಅವರು ಕೇಂದ್ರ ಸರ್ಕಾರದ ನಿಲುವಿಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನೀತಿಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದ ಅವರು, ಇದು ತಮಿಳುನಾಡಿನ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅನಗತ್ಯ ಮಾನಸಿಕ ಒತ್ತಡ ಉಂಟುಮಾಡುತ್ತಿದೆ ಎಂದು 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.

ಕರ್ನಾಟಕದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿದ್ದ ಅಣ್ಣಾಮಲೈ, 2020ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಎಲ್. ಮುರುಗನ್ ಅವರ ಬಳಿಕ 2021ರಲ್ಲಿ ತಮಿಳುನಾಡು ಬಿಜೆಪಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು 2025ರವರೆಗೆ ಮುನ್ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.