ದೇಶ

ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ತಂದೆ ಮತ್ತು ಮಗ ಸೇರಿದಂತೆ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರ!

ಪಂಜಾಬ್‌ನ ಲುಧಿಯಾನದಲ್ಲಿರುವ ಕಾರ್ಖಾನೆಯಲ್ಲಿ ತಡರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿದ್ದು, ಪ್ರಜ್ಞಾಹೀನರಾಗಿದ್ದ ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ತಂದೆ ಮತ್ತು ಮಗ ಸೇರಿದಂತೆ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರ!
ಸಂಗ್ರಹ ಚಿತ್ರ — IANS
Published On :

ಲುಧಿಯಾನ: ಪಂಜಾಬ್‌ನ ಲುಧಿಯಾನದಲ್ಲಿರುವ ಕಾರ್ಖಾನೆಯಲ್ಲಿ ತಡರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ. ಅನಿಲ ಸೋರಿಕೆಯಿಂದಾಗಿ ಪ್ರಜ್ಞಾಹೀನರಾಗಿದ್ದ ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ತಂದೆ, ಮಗ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಗಾಸ್‌ಪುರ ನಿವಾಸಿಗಳಾದ ಮಾನ್ ಸಿಂಗ್ ಮತ್ತು ಅವರ ಮಗ ಅಮಿತ್ ಎಂದು ಗುರುತಿಸಲಾಗಿದೆ, ಆದರೆ ಇನ್ನೊಬ್ಬ ಮೃತ ವ್ಯಕ್ತಿಯ ಗುರುತು ಇನ್ನೂ ತಿಳಿದಿಲ್ಲ.

ಲುಧಿಯಾನದ ಗಾಸ್‌ಪುರದ ಗಗನ್ ನಗರ ಪ್ರದೇಶದಲ್ಲಿ ಉಪಕರಣ ತಯಾರಿಸುವ ಕಾರ್ಖಾನೆ ಇದೆ. ಭಾನುವಾರ ರಾತ್ರಿ ಕಾರ್ಮಿಕರು ಕಾರ್ಖಾನೆಗೆ ಆಗಮಿಸಿದರು. ತಡರಾತ್ರಿ ವಿಷಕಾರಿ ಅನಿಲ ಸೋರಿಕೆಯಾಗಿ ಕಾರ್ಮಿಕರನ್ನು ಹೊರ ತರಲಾಗಿತ್ತು. ಮೃತರ ಮಗಳು ರೇಣು, ತನ್ನ ತಂದೆಯನ್ನು ತಡರಾತ್ರಿ ಕಾರ್ಖಾನೆಯಲ್ಲಿ ಕೆಲಸ ಮಾಡಲು ಒತ್ತಾಯಿಸಲಾಯಿತು ಎಂದು ಹೇಳಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ, ಕಾರ್ಖಾನೆ ಮಾಲೀಕರು ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿದರು. ಆದರೆ ಯಾವುದೇ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿರಲಿಲ್ಲ. ತಂದೆ ಬೆಳಗ್ಗೆ ಮನೆಗೆ ಬಾರದ ಕಾರಣ ಕಾರ್ಖಾನೆ ಬಳಿ ಹೋದಾಗ ಕೆಲವು ಕಾರ್ಮಿಕರು ಅನಿಲ ಸೋರಿಕೆಯಿಂದ ಮೂರ್ಛೆ ಹೋಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ವಿಚಾರ ತಿಳಿಯಿತು. ಆಸ್ಪತ್ರೆಗೆ ಬಂದಾಗ ನನ್ನ ತಂದೆ ಮಾನ್ ಸಿಂಗ್ ಮತ್ತು ಅಮಿತ್ ಮೃತಪಟ್ಟಿದ್ದಾರೆ ಎಂದು ತಿಳಿಯಿತು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.