ದೆಹಲಿ: ರೆಸ್ಟೋರೆಂಟ್ ನಲ್ಲಿ ಭಾರೀ ಅಗ್ನಿ ಅವಘಡ; ಹಲವು ವಿದೇಶಿ ಪ್ರವಾಸಿಗರು ಸೇರಿ 21 ಮಂದಿ ಸಜೀವ ದಹನ; ಪ್ರಧಾನಿ ಮೋದಿ ಸಂತಾಪ; Video
37 ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ 21 ಜನರು ಮೃತ ಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯ ನಗರ ಪ್ರದೇಶದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 21 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಬೆಂಕಿಗೆ ಸಿಲುಕಿ ಸಾವನ್ನಪ್ಪಿದವರಲ್ಲಿ ಹಲವರು ಮಧ್ಯ ಏಷ್ಯಾ ಮತ್ತು ಆಫ್ರಿಕಾದ ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೆಮನ್ ಗ್ರೀನ್ ರೆಸ್ಟೋರೆಂಟ್ ಎಂಬ ರೆಸ್ಟೋರೆಂಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಬೆಳಿಗ್ಗೆ ಸುಮಾರು 8.50 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು,ತಕ್ಷಣ ಹಲವು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
37 ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ 21 ಜನರು ಮೃತ ಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಹೊಗೆ ತುಂಬಿದ ನೆಲಮಾಳಿಗೆಗೆ ಪ್ರವೇಶಿಸಿ ಒಳಗೆ ಸಿಲುಕಿದ್ದ ಮೂವರನ್ನು ಸ್ಥಳಾಂತರಿಸುವಲ್ಲಿ ಯಶಸ್ವಿಯಾದರು.ಕಟ್ಟಡದ ನೆಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರೆಸ್ಟೋರೆಂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ಸಂಶೋಧನೆಗಳು ಸೂಚಿಸುತ್ತವೆ, ಆದರೂ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ದಕ್ಷಿಣ ದೆಹಲಿಯ ಮಾಳವೀಯ ನಗರದ ಬೆಡ್ ಮತ್ತು ಬ್ರೇಕ್‌ಫಾಸ್ಟ್ ಹೋಟೆಲ್‌ನಲ್ಲಿ ಬುಧವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿರುವ ಪ್ರಧಾನಿ ಮೋದಿ, ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು.ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


