ದೇಶ

ದೆಹಲಿ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ; 'ನರಹತ್ಯೆ' ಪ್ರಕರಣ ದಾಖಲಿಸಿದ ಪೊಲೀಸರು! Video

ದಕ್ಷಿಣ ದೆಹಲಿ ಪ್ರದೇಶದ ಐದು ಅಂತಸ್ತಿನ ಕಟ್ಟಡವಾದ ಫ್ಲೋರಿಷ್ ಸ್ಟೇ ಬೆಡ್-ಅಂಡ್ ಬ್ರೇಕ್‌ಫಾಸ್ಟ್‌ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ದೆಹಲಿ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ; 'ನರಹತ್ಯೆ' ಪ್ರಕರಣ ದಾಖಲಿಸಿದ ಪೊಲೀಸರು! Video
ದಕ್ಷಿಣ ದೆಹಲಿಯ ಮಾಳವೀಯ ನಗರ ಪ್ರದೇಶದ ಐದು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಡ್-ಅಂಡ್ ಬ್ರೇಕ್‌ಫಾಸ್ಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಪೊಲೀಸರು ಆ ಪ್ರದೇಶವನ್ನು ಸುತ್ತುವರೆದಿದ್ದಾರೆ. — KARMA
Published On :

ನವದೆಹಲಿ: ದಕ್ಷಿಣ ದೆಹಲಿಯ ಮಾಲ್ವಿಯಾ ನಗರದಲ್ಲಿ ಬುಧವಾರ ಕನಿಷ್ಠ 21 ಜನರ ಸಾವಿಗೆ ಕಾರಣವಾದ ಹೋಟೆಲ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಿಕ್ಷಾರ್ಹ ನರಹತ್ಯೆ (culpable homicide) ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ದೆಹಲಿ ಪ್ರದೇಶದ ಐದು ಅಂತಸ್ತಿನ ಕಟ್ಟಡವಾದ ಫ್ಲೋರಿಷ್ ಸ್ಟೇ ಬೆಡ್-ಅಂಡ್ ಬ್ರೇಕ್‌ಫಾಸ್ಟ್‌ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಮೃತರಲ್ಲಿ ಹಲವರು ವಿದೇಶಿ ಪ್ರಜೆಗಳು. ಹಲವಾರು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ವಿದೇಶಿಯರು ಮುಖ್ಯವಾಗಿ ಮಧ್ಯ ಏಷ್ಯಾ ಮತ್ತು ಆಫ್ರಿಕನ್ ದೇಶಗಳಿಂದ ಬಂದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕನಿಷ್ಠ 26 ಜನರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಮಾಲ್ವಿಯಾ ನಗರದ ಜನದಟ್ಟಣೆಯಿಂದ ಕೂಡಿರುವ ಹೌಜ್ ರಾಣಿ ಪ್ರದೇಶದಲ್ಲಿರುವ ಫ್ಲೋರಿಶ್ ಸ್ಟೇ ಬಿ & ಬಿ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇದಕ್ಕೂ ಮೊದಲು, ಹತ್ತಿರದ ಲೆಮನ್ ಗ್ರೀನ್ ರೆಸ್ಟೋರೆಂಟ್‌ನಲ್ಲಿ ಬೆಳಿಗ್ಗೆ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು ಎಂದು ಅಧಿಕಾರಿಗಳು ಹೇಳಿದ್ದರು. ಆದರೆ, ನಂತರ ಪೊಲೀಸರು ಹೋಟೆಲ್ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಸ್ಪಷ್ಟಪಡಿಸಿದರು.

ಅಗ್ನಿಶಾಮಕ ಅಧಿಕಾರಿ ಎಕೆ ಮಲಿಕ್ ಅವರ ಪ್ರಕಾರ, ಕಟ್ಟಡವು ನೆಲಮಾಳಿಗೆ, ನೆಲ ಮಹಡಿ ಮತ್ತು ಐದು ಮೇಲಿನ ಮಹಡಿಗಳನ್ನು ಹೊಂದಿದೆ. ರೆಸ್ಟೋರೆಂಟ್ ಅನ್ನು ನೆಲ ಮಹಡಿಯಲ್ಲಿ ನಡೆಸಲಾಗುತ್ತಿತ್ತು, ಉಳಿದ ಕಟ್ಟಡವನ್ನು ಹೋಟೆಲ್ ಆಗಿ ಬಳಸಲಾಗುತ್ತಿತ್ತು.

ಪೊಲೀಸ್ ಮೂಲಗಳ ಪ್ರಕಾರ, ಹೋಟೆಲ್‌ಗೆ ಒಂದೇ ಒಂದು ಪ್ರವೇಶ-ನಿರ್ಗಮನ ದ್ವಾರವಿತ್ತು. ಅಧಿಕಾರಿಗಳು ಕಟ್ಟಡಕ್ಕೆ ನೀಡಲಾದ ಅಗ್ನಿಶಾಮಕ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (ಎನ್‌ಒಸಿ) ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.