ದೇಶ

Z-Plus ಭದ್ರತೆ ವಾಪಸ್ ಪಡೆದ ಸರ್ಕಾರ: ಹೊಸ ಭದ್ರತಾ ವ್ಯವಸ್ಥೆ ತಿರಸ್ಕರಿಸಿದ ಲಾಲು ಪ್ರಸಾದ್, ರಾಬ್ರಿ ದೇವಿ!

ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತವಾಗಿದೆ ಮತ್ತು ಯಾದವ್ ಕುಟುಂಬವನ್ನು ಗುರಿಯಾಗಿಸಲು ಉದ್ದೇಶಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

Z-Plus ಭದ್ರತೆ ವಾಪಸ್ ಪಡೆದ ಸರ್ಕಾರ: ಹೊಸ ಭದ್ರತಾ ವ್ಯವಸ್ಥೆ ತಿರಸ್ಕರಿಸಿದ ಲಾಲು ಪ್ರಸಾದ್, ರಾಬ್ರಿ ದೇವಿ!
ತೇಜಸ್ವಿ ಯಾದವ್, ಲಾಲು ಪ್ರಸಾದ್ ಯಾದವ್
Published On :

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲುಪ್ರಸಾದ್ ಯಾದವ್ ಹಾಗೂ ರಾಬ್ರಿದೇವಿ ಅವರಿಗೆ ನೀಡಲಾಗಿದ್ದ Z-Plus ಭದ್ರತೆಯನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ಹೊಸದಾಗಿ ನೀಡಲಾದ ಭದ್ರತಾ ವ್ಯವಸ್ಥೆಯನ್ನು ಅವರು ತಿರಸ್ಕರಿಸಿದ್ದಾರೆ.

Z+ (ಝೆಡ್-ಪ್ಲಸ್) ಭದ್ರತೆಯು ಭಾರತದಲ್ಲಿ ಗಣ್ಯ ವ್ಯಕ್ತಿಗಳಿಗೆ (ವಿಐಪಿ) ನೀಡಲಾಗುವ ಅತ್ಯುನ್ನತ ಮಟ್ಟದ ರಕ್ಷಣೆಯಾಗಿದೆ. ಭಯೋತ್ಪಾದನೆ ಅಥವಾ ಗಂಭೀರ ಜೀವ ಬೆದರಿಕೆಯನ್ನು ಎದುರಿಸುತ್ತಿರುವ ಉನ್ನತ ರಾಜಕಾರಣಿಗಳು, ಮಂತ್ರಿಗಳು ಮತ್ತು ಉದ್ಯಮಿಗಳಿಗೆ ಇದನ್ನು ಒದಗಿಸಲಾಗುತ್ತದೆ.

Z+ ಭದ್ರತಾ ವ್ಯವಸ್ಥೆಯಲ್ಲಿ 10 ಕ್ಕೂ ಹೆಚ್ಚು ಎನ್‌ಎಸ್‌ಜಿ (NSG - ನ್ಯಾಷನಲ್ ಸೆಕ್ಯುರಿಟಿ ಗಾರ್ಡ್) ಕಮಾಂಡೋಗಳು ಸೇರಿದಂತೆ ಒಟ್ಟು 55 ಭದ್ರತಾ ಸಿಬ್ಬಂದಿ ಇರುತ್ತಾರೆ. ಈ ವ್ಯವಸ್ಥೆಯನ್ನು ವಾಪಸ್ ಪಡೆದುಕೊಂಡ ನಂತರ ಲಾಲು ಪ್ರಸಾದ್ ಯಾದವ್ ಹಾಗೂ ರಾಬ್ರಿ ದೇವಿ ಶನಿವಾರ ಬೆಳಿಗ್ಗೆ ಹೊಸದಾಗಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದಾರೆ. ಇದು ಬಿಹಾರದಲ್ಲಿ ಹೊಸ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.

ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತವಾಗಿದೆ ಮತ್ತು ಯಾದವ್ ಕುಟುಂಬವನ್ನು ಗುರಿಯಾಗಿಸಲು ಉದ್ದೇಶಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪರಿಷ್ಕೃತ ಭದ್ರತಾ ವ್ಯವಸ್ಥೆಯಲ್ಲಿ BSAPಯ ಎರಡರಿಂದ ಎಂಟು ಗೃಹರಕ್ಷಕರು, ಪಾಟ್ನಾ ಜಿಲ್ಲಾ ಪಡೆಯ ಇಬ್ಬರು ಅಂಗರಕ್ಷಕರು, ಜೊತೆಗೆ ಪೈಲಟ್ ವಾಹನ ಮತ್ತು ಗುಂಡು ನಿರೋಧಕ ಕಾರು ಸೇರಿದ್ದವು. ಆದಾಗ್ಯೂ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯನ್ನು ಹೊರಹೋಗುವಂತೆ ಸೂಚಿಸಲಾಗಿದೆ.

ಹಲವಾರು ಆರ್‌ಜೆಡಿ ಕಾರ್ಯಕರ್ತರು ಮನೆ ಹೊರಗಡೆ ನಿಂತಿರುವುದು ಕಂಡುಬಂದಿದೆ, ಕೆಲವರು ಕೋಲುಗಳನ್ನು ಹಿಡಿದು ಕಾವಲು ಕಾಯುತ್ತಿರುವುದನ್ನು ಕಾಣಬಹುದು. ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ತಮಗೆ ನೀಡಲಾಗಿದ್ದ ವೈ-ಕೆಟಗರಿ ಭದ್ರತೆಯನ್ನು ವಾಪಸ್ ಕಳುಹಿಸಿದ ನಂತರ ವಿವಾದ ಮತ್ತಷ್ಟು ಹೆಚ್ಚಾಯಿತು.

ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರಿಗೆ ಈ ಹಿಂದೆ ನೀಡಲಾಗಿದ್ದ ವೈ-ಕೆಟಗರಿ ಭದ್ರತೆಯನ್ನು ಸಹ ಹಿಂತೆಗೆದುಕೊಳ್ಳಲಾಗಿದೆ. ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.ದುರುದ್ದೇಶಪೂರಿತ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.