ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7 ಮಂದಿ ಸುಟ್ಟು ಕರಕಲು!
ರಾಜಸ್ಥಾನದ ರಾಜಧಾನಿ ಜೈಪುರದ ಖೋ-ನಗೋರಿಯನ್ ಪ್ರದೇಶದ ಸಣ್ಣ ಮನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು ಹಲವಾರು ಗಾಯಗೊಂಡಿದ್ದಾರೆ...

ರಾಜಸ್ಥಾನದ ರಾಜಧಾನಿ ಜೈಪುರದ ಖೋ-ನಗೋರಿಯನ್ ಪ್ರದೇಶದ ಸಣ್ಣ ಮನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು ಹಲವಾರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಮನೆಯಲ್ಲಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು. ಆದಾಗ್ಯೂ, ಪೊಲೀಸರು ಅಗ್ನಿ ಅವಘಡಕ್ಕೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ಎಸ್ಎಂಎಸ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಮೃಣಾಲ್ ಜೋಶಿ ಅವರು ಸುಟ್ಟ ಗಾಯಗಳಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಜೈಪುರ ಕಲೆಕ್ಟರ್ ಸಂದೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟ ಸಂಭವಿಸುತ್ತಿದ್ದಂತೆ ಸ್ಥಳೀಯರು ನೀರು ಸುರಿಯುವ ಮೂಲಕ ಮನೆಯ ಒಂದು ಭಾಗಕ್ಕೆ ಪ್ರವೇಶಿಸಿ ಅಲ್ಲಿ ಸಿಲುಕಿಕೊಂಡಿದ್ದ ಕೆಲವರನ್ನು ರಕ್ಷಿಸಿದ್ದಾರೆ. ಈ ಪೈಕಿ ಹಲವು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



