ಮೋದಿ ಪ್ರಧಾನಿಯಾಗಿ 4,399 ದಿನಗಳು ಪೂರ್ಣ: ಸಾಧನೆಗಳ ಪಟ್ಟಿ ನೀಡಿದ ಬಿಜೆಪಿ!
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ 4, 399 ದಿನಗಳಲ್ಲಿ ಅವರು ಮಾಡಿರುವ ಸಾಧನೆಗಳನ್ನು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದೆ.

ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ 4,399 ದಿನಗಳು ಅಂದರೆ 12 ವರ್ಷ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ಜವಹರ್ ಲಾಲ್ ನೆಹರು ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಸಂದರ್ಭವನ್ನು ಬಿಜೆಪಿ ಸಂಭ್ರಮದಿಂದ ದೇಶಾದ್ಯಂತ ಆಚರಿಸುತ್ತಿದೆ.
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ 4, 399 ದಿನಗಳಲ್ಲಿ ಅವರು ಮಾಡಿರುವ ಸಾಧನೆಗಳನ್ನು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದೆ.
ಮೂಲಸೌಕರ್ಯ, ಸ್ಟಾರ್ಟ್‌ಅಪ್ ಸೇರಿದಂತೆ ಹೂಡಿಕೆಯವರೆಗೆ ಭಾರತವಿಂದು ಮಹತ್ವದ ದಾಖಲೆಗಳನ್ನು ನಿರ್ಮಿಸಿದೆ. ಸಮರ್ಥ ನಾಯಕತ್ವ, ದೂರದೃಷ್ಟಿ ಮತ್ತು ದೃಢ ಸಂಕಲ್ಪದೊಂದಿಗೆ ನವ ಭಾರತ ಆತ್ಮನಿರ್ಭರವಾಗುತ್ತಿದೆ ಎಂದು ಹೇಳಿದೆ.
2014ರಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗ ದೇಶದಲ್ಲಿದ್ದ ವಿಮಾನ ನಿಲ್ದಾಣಗಳ ಸಂಖ್ಯೆ 74. ಈಗ ಅದು 164ಕ್ಕೆ ಏರಿಕೆಯಾಗಿದೆ. 51, 348 ಎಂಬಿಬಿಎಸ್ ಸೀಟುಗಳು ಈಗ 1.28 ಲಕ್ಷ ಆಗಿದೆ. 13 IIM ಗಳು ಈಗ 21ಕ್ಕೆ ಏರಿಕೆಯಾಗಿವೆ. 304 ಶತಕೋಟಿ ಡಾಲರ್ ನಷ್ಟಿದ್ದ ವಿದೇಶಿ ವಿನಿಮಯ 680 ಶತಕೋಟಿ ಡಾಲರ್ ಗೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



