ಭಿನ್ನ ಕಾಲಘಟ್ಟದಲ್ಲಿ ವಿಭಿನ್ನ ಸವಾಲು: 3 ಬಾರಿ ಜನಾದೇಶ-ಸುದೀರ್ಘ ಆಡಳಿತ; ನೆಹರು ದಾಖಲೆ ಮುರಿದ ಮೋದಿ!
ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ದಾಖಲೆಯು ಕಳೆದ 64 ವರ್ಷಗಳಿಂದಲೂ ಅಚ್ಚಳಿಯದೇ ಉಳಿದಿತ್ತು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲಿಗಲ್ಲು ತಲುಪಿದ್ದಾರೆ.
2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು ಇಂದಿಗೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಿದ್ದಾರೆ.
ಇದರೊಂದಿಗೆ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ದಾಖಲೆಯು ಕಳೆದ 64 ವರ್ಷಗಳಿಂದಲೂ ಅಚ್ಚಳಿಯದೇ ಉಳಿದಿತ್ತು.
ನೆಹರೂ ಅವರು 4,398 ದಿನಗಳವರೆಗೆ ದೇಶದ ಪ್ರಧಾನಿ ಹುದ್ದೆಯಲ್ಲಿದ್ದರು. ಶೂನ್ಯದಿಂದ ದೇಶವನ್ನು ಕಟ್ಟುವ, ಹಲವು ಸಂಸ್ಥಾನಗಳಲ್ಲಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸುವ ಸವಾಲನ್ನು ನೆಹರೂ ಎದುರಿಸಿದ್ದರೆ, ಆಧುನಿಕ ಜಗತ್ತಿನಲ್ಲಿ ಭಾರತದ ಆರ್ಥಿಕ ಮತ್ತು ಆಡಳಿತಾತ್ಮಕ ವ್ಯವಸ್ಥೆಯನ್ನು ಮರುರೂಪಿಸುವ, ರಾಜತಾಂತ್ರಿಕ ಸವಾಲುಗಳನ್ನು ಮೋದಿ ಎದುರಿಸುತ್ತಿದ್ದಾರೆ.
ಶತಮಾನಗಳ ವಸಾಹತುಶಾಹಿ ಆಳ್ವಿಕೆಯ ನಂತರ ರಾಜಕೀಯ ಸ್ಥಿರತೆ, ನವ ಭಾರತದ ನಿರ್ಮಾಣ ಮತ್ತು ಬಡತನ ನಿರ್ಮೂಲನೆಯ ದೊಡ್ಡ ಸವಾಲನ್ನು ಹೊತ್ತು ಹೊಸದಾಗಿ ಸ್ವತಂತ್ರಗೊಂಡ ರಾಷ್ಟ್ರವನ್ನು ನೆಹರೂ ಮುನ್ನಡೆಸಿದರು.
ಪ್ರಧಾನಿ ಮೋದಿ ಅವರು ಜಾಗತಿಕ ಆರ್ಥಿಕತೆಯೊಂದಿಗೆ ಹೆಚ್ಚು ಸಂಬಂಧ ಹೊಂದಿರುವ, ರಾಜಕೀಯವಾಗಿ, ಸ್ಪರ್ಧಾತ್ಮಕವಾಗಿ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳಿಗೆ ಹಿಂದೆಂದಿಗಿಂತಲೂ ಹೆಚ್ಚು ಒಡ್ಡಿಕೊಂಡ ಭಾರತವನ್ನು ಆಳುತ್ತಿದ್ದಾರೆ.
ನರೇಂದ್ರ ಮೋದಿ ಅವರ ಈ 4,399 ದಿನಗಳ ಆಡಳಿತ ಕೇವಲ ಒಂದು ಅಂಕಿ ಅಂಶವಲ್ಲ, ಅದೊಂದು ಭಾರತೀಯರ ನಂಬಿಕೆಯ ಸಂಕೇತ. 2047ರ ಹೊತ್ತಿಗೆ 'ವಿಕಸಿತ ಭಾರತ' ನಿರ್ಮಾಣದ ಸಂಕಲ್ಪ ತೊಟ್ಟಿರುವ ಮೋದಿಯವರ ಹೆಜ್ಜೆಗಳು ಈಗ ಮತ್ತಷ್ಟು ವೇಗ ಪಡೆದುಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



