Ujjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌದೆ ಒಲೆಯತ್ತ 'ತಳ್ಳುತ್ತಿದ್ದಾರೆ'- ರಾಹುಲ್ ಆರೋಪ!
ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಸಬ್ಸಿಡಿ ಹೊಂದಿರುವ ಎಲ್‌ಪಿಜಿ ಸಿಲಿಂಡರ್‌ಗಳ ವಾರ್ಷಿಕ ಕೋಟಾವನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸುವ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ಮತ್ತೆ ಸೌಧೆ ಒಲೆಯತ್ತ ತಳ್ಳಿದ್ದಾರೆ ಎಂದು ಆರೋಪಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ. ಉಜ್ವಲ ಯೋಜನೆಯಡಿಯಲ್ಲಿ ಸಬ್ಸಿಡಿ ಹೊಂದಿರುವ ಸಿಲಿಂಡರ್‌ಗಳ ಸಂಖ್ಯೆಯನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸಲಾಗಿದೆ ಮತ್ತು ಕಳೆದ ಮೂರು ತಿಂಗಳಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ರೂ.89 ರಷ್ಟು ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಮೊದಲು ಬೆಲೆಗಳನ್ನು ಹೆಚ್ಚಿಸಿ ನಂತರ ಸಬ್ಸಿಡಿಗಳನ್ನು ಕಡಿತಗೊಳಿಸಿ ಮತ್ತು ಬಡವರ ಒಲೆ ನಂದಿಸಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ವಲಸೆ ಕಾರ್ಮಿಕರು ಹೆಚ್ಚಾಗಿ ಬಳಸುವ 5 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 323 ರೂ.ಗಳಷ್ಟು ಏರಿಕೆಯಾಗಿದೆ. ಇದರಿಂದ ಕಾರ್ಮಿಕರು ತಮ್ಮ ಖರ್ಚುಗಳನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರ ಶ್ರೀಮಂತ ಕೈಗಾರಿಕೋದ್ಯಮಿಗಳಿಗೆ ಬೆಂಬಲ ನೀಡುತ್ತಿದೆ ಮತ್ತು ಬಡವರ ಮೇಲೆ ಹೊರೆಯಾಗಿದೆ ಎಂದು ಗಾಂಧಿ ಆರೋಪಿಸಿದರು. ಕಾರ್ಮಿಕರು, ರೈತರು, ಮಹಿಳೆಯರು ಮತ್ತು ಮಧ್ಯಮ ವರ್ಗದವರು ಹೆಚ್ಚಾಗುತ್ತಿರುವ ಆರ್ಥಿಕ ವೆಚ್ಚವನ್ನು ಹೇಗೆ ನಿರ್ವಹಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಸರಾಸರಿ ಗೃಹಬಳಕೆಯ ಬಳಕೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಸೋಮವಾರ ಹೇಳಿಕೆ ನೀಡಿತ್ತು.
2016 ರಲ್ಲಿ ಪ್ರಾರಂಭಿಸಲಾದ PMUY ಯೋಜನೆಯ ಫಲಾನುಭವಿಗಳಿಗೆ ಆರಂಭದಲ್ಲಿ ವಾರ್ಷಿಕವಾಗಿ 14.2 ಕೆಜಿಯ 12 LPG ಸಿಲಿಂಡರ್‌ಗಳನ್ನು ಒದಗಿಸಿತು. ಕಳೆದ ವರ್ಷ ಈ ಸಂಖ್ಯೆಯನ್ನು ಒಂಬತ್ತಕ್ಕೆ ಇಳಿಸಲಾಗಿತ್ತು ಮತ್ತು ಈಗ ಅದನ್ನು ನಾಲ್ಕಕ್ಕೆ ಇಳಿಸಲಾಗಿದೆ. ಮೇ 2022 ರಲ್ಲಿ ಸರ್ಕಾರವು ಉಜ್ವಲ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ ರೂ.200 ಸಬ್ಸಿಡಿಯನ್ನು ನಿಗದಿಪಡಿಸಿತು. ಇದನ್ನು ಅಕ್ಟೋಬರ್ 2023 ರಲ್ಲಿ ರೂ.300 ಕ್ಕೆ ಹೆಚ್ಚಿಸಲಾಯಿತು. ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.
ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಮಧ್ಯೆ ಅಂತರರಾಷ್ಟ್ರೀಯ ಕಚ್ಚಾ ತೈಲ ಮತ್ತು ಎಲ್‌ಪಿಜಿ ಬೆಲೆಗಳು ತೀವ್ರ ಏರಿಳಿತಗಳನ್ನು ಕಂಡಿದ್ದು, ಇದು ಭಾರತದಲ್ಲಿ ದೇಶೀಯ ಇಂಧನ ವೆಚ್ಚಗಳ ಮೇಲೆ ಪರಿಣಾಮ ಬೀರುತ್ತಿದೆ ಎಂಬುದು ಸರ್ಕಾರದ ವಾದವಾಗಿದೆ.

INDIA ಮೈತ್ರಿಕೂಟದಲ್ಲಿ ಗದ್ದಲ: DMK, AAP ಗೈರು ಹಿನ್ನಲೆ ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ವ್ಯಾಪಕ ಆಕ್ರೋಶ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


