ಕೇರಳದ ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ Shigella ಪತ್ತೆ; ಏನಿದು ಸೋಂಕು? ಹೇಗೆ ಹರಡುತ್ತದೆ? ನಿಯಂತ್ರಣ ಹೇಗೆ? ಇಲ್ಲಿದೆ ಮಾಹಿತಿ..
ಕೇರಳದ ಕೊಲ್ಲಂ ಜಿಲ್ಲೆಯ ಪರಿಪ್ಪಳ್ಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಶಿಗೆಲ್ಲಾ (Shigella) ಸೋಂಕು ದೃಢಪಟ್ಟಿದೆ.

ಕೊಲ್ಲಂ: ವಿಶ್ವಾದ್ಯಂತ ಮಾರಕ ಎಬೋಲಾ ಸೋಂಕಿನ ಭೀತಿ ಹರಡಿರುವ ನಡುವೆಯೇ ಕೇರಳದಲ್ಲಿ ಮತ್ತೊಂದು ಸೋಂಕು ವ್ಯಾಪಕ ಅತಂಕ ಸೃಷ್ಟಿಸಿದೆ.
ಕೇರಳದ ಕೊಲ್ಲಂ ಜಿಲ್ಲೆಯ ಪರಿಪ್ಪಳ್ಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಶಿಗೆಲ್ಲಾ (Shigella) ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಗುರುವಾರ ತಿಳಿಸಿದೆ.
ಪ್ರಸ್ತುತ ಸುಮಾರು 38 ವಿದ್ಯಾರ್ಥಿಗಳು ಶಿಗೆಲ್ಲಾ ಸೋಂಕಿನ ಲಕ್ಷಣಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳನ್ನು ಅತಿಸಾರ (ಭೇದಿ), ವಾಂತಿ ಹಾಗೂ ಜ್ವರದಂತಹ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆಯಲ್ಲಿ ಬ್ಯಾಕ್ಟೀರಿಯಾ ಸೋಂಕು ಇರುವುದು ದೃಢಪಟ್ಟಿದೆ.
ಸೋಂಕು ದೃಢಪಟ್ಟ ನಂತರ, ಆರೋಗ್ಯ ಅಧಿಕಾರಿಗಳು ನಿಗಾ ಕ್ರಮಗಳನ್ನು ತೀವ್ರಗೊಳಿಸಿದ್ದು, ರೋಗ ಹರಡುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಆರಂಭಿಸಿದ್ದಾರೆ. ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ಸುರಕ್ಷಿತ ಕುಡಿಯುವ ನೀರನ್ನು ಮಾತ್ರ ಬಳಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಶಿಗೆಲ್ಲಾ ಸೋಂಕು (ಶಿಗೆಲ್ಲೋಸಿಸ್) ಅತ್ಯಂತ ಸಾಂಕ್ರಾಮಿಕ ಬ್ಯಾಕ್ಟೀರಿಯಾ ಸೋಂಕಾಗಿದ್ದು, ಇದು ಮುಖ್ಯವಾಗಿ ಕರುಳಿನ ಮೇಲೆ ಪರಿಣಾಮ ಬೀರುತ್ತದೆ. ಇದರ ಪರಿಣಾಮವಾಗಿ ತೀವ್ರ ಅತಿಸಾರ, ಜ್ವರ, ಹೊಟ್ಟೆನೋವು ಹಾಗೂ ಕರುಳು ಖಾಲಿಯಾಗಿದ್ದರೂ ಮಲವಿಸರ್ಜನೆ ಮಾಡುವ ತೀವ್ರ ಅಗತ್ಯತೆ ಉಂಟಾಗುತ್ತದೆ.
ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಉತ್ತಮ ಸ್ವಚ್ಛತಾ ಅಭ್ಯಾಸಗಳು, ಸುರಕ್ಷಿತ ಆಹಾರ ಮತ್ತು ನೀರಿನ ಸೇವನೆ ಹಾಗೂ ನೈರ್ಮಲ್ಯದ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸುವುದು ಶಿಗೆಲ್ಲೋಸಿಸ್ ತಡೆಗಟ್ಟಲು ಅತ್ಯಂತ ಅಗತ್ಯವಾಗಿದೆ.
ಕೇರಳ ಆರೋಗ್ಯ ಸಚಿವ ಕೆ. ಮುರಳೀಧರನ್ ಅವರು, ವಯನಾಡು ಜಿಲ್ಲೆಯಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳು ಸ್ವಚ್ಛತೆ ಮತ್ತು ನೈರ್ಮಲ್ಯ ಕ್ರಮಗಳನ್ನು ಇನ್ನಷ್ಟು ಬಲಪಡಿಸಬೇಕು ಎಂದು ಮಂಗಳವಾರ ಕರೆ ನೀಡಿದ್ದರು.
ವಯನಾಡು ಜಿಲ್ಲೆಯಲ್ಲಿ ಗುರುವಾರದವರೆಗೆ ವಿದ್ಯಾರ್ಥಿಗಳಲ್ಲಿ ಶಿಗೆಲ್ಲಾ ಸೋಂಕಿನ 8 ದೃಢೀಕೃತ ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



