ಪುಣೆ ರ‍್ಯಾಲಿಯಲ್ಲಿ ಸಾವಿರಾರು 'ಕಾಕ್ರೋಚ್' ಭಾಗಿ: ಮುಂದಿನ CJP ಪ್ರತಿಭಟನೆಗಳ ವೇಳಾಪಟ್ಟಿ ಪ್ರಕಟ!
ಸಂಘಟಕರು ಸಾಮಾಜಿಕ ಮಾಧ್ಯಮವನ್ನು ಮೀರಿ ಅನೇಕ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು, ಇಂದು ಪುಣೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆದಿರುವುದಾಗಿ CJP ತಿಳಿಸಿದೆ.

ಪುಣೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಪ್ರತಿಭಟನೆ ಆರಂಭಿಸಿದ್ದು, ಇಂದು ಪುಣೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಸಂಘಟಕರು ಸಾಮಾಜಿಕ ಮಾಧ್ಯಮವನ್ನು ಮೀರಿ ಅನೇಕ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು, ಇಂದು ಪುಣೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆದಿರುವುದಾಗಿ CJP ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪುಣೆಯಲ್ಲಿ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು. ಮುಂದಿನ ದಿನಗಳಲ್ಲಿ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದೆ.

ನಾನೊಬ್ಬ 'ಹಾನರರಿ ಕಾಕ್ರೋಚ್': CJP ಬೆಂಬಲಿಸಿದ ಸೋನಮ್ ವಾಂಗ್ಚುಕ್; ಯುವಕರ ಮಾತು ಕೇಳುವಂತೆ ಕೇಂದ್ರಕ್ಕೆ ಆಗ್ರಹ
ಮತ್ತೊಂದು ಪ್ರತ್ಯೇಕ ಪೋಸ್ಟ್ ನಲ್ಲಿ ಮುಂದಿನ ಪ್ರತಿಭಟನೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಪಾಲ್ಗೊಳುವಂತೆ ಕರೆ ನೀಡಿದೆ.
ಜೂನ್ 12 ರಂದು ಲಖನೌ, ಜೂನ್ 13 ರಂದು ಅಮೃತಸರ, ಜೂನ್ 14 ರಂದು ಹೈದರಾಬಾದ್ ಮತ್ತು ಜೂನ್ 15 ರಂದು ಜೈಪುರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕಾಕ್ರೋಚ್ ಜನತಾ ಪಕ್ಷ ಮಾಹಿತಿ ಹಂಚಿಕೊಡಿದೆ.
ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ: ಈ ತಿಂಗಳ ಕೊನೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಗೆ ಸಂಘಟನೆ ಮನವಿ ಮಾಡಿದೆ. ದೇಶಾದ್ಯಂತ ಯುವಕರು ಜೂನ್ 20 ರಂದು ಬೃಹತ್ ಪ್ರತಿಭಟನೆಗಾಗಿ ದೆಹಲಿಗೆ ಬರಬೇಕೆಂದು ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


